Oplus_0

ಮುತ್ತಗಾ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿ ಅವಮಾನಿಸಿದ ಕಿಡಿಗೇಡಿಗಳನ್ನು ಉಗ್ರ ಶಿಕ್ಷೆಗೆ ಗುರಿಪಡಿಸಿ: ಸಜ್ಜನಶೆಟ್ಟಿ ಆಗ್ರಹ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ಕಳೆದ ಅ.9 ರಂದು ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿ ಅವಮಾನಿಸಿದ ಘಟನೆಯನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ, ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಕೈಗೊಂಡು ತಪ್ಪಿತಸ್ಥರನ್ನು ಉಗ್ರ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಆಗ್ರಹಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಸರ್ಕಾರ ಕೈಗೊಂಡ ಬುಲ್ಡೋಜರ್ ಕ್ರಮ ಇಲ್ಲಿಯೂ ಆಗಬೇಕು ಅಂದಾಗ ಕಿಡಿಗೇಡಿಗಳಲ್ಲಿ ಭಯ ಹುಟ್ಟಲಿದೆ ಎಂದು ಹೇಳಿದರು.

ಅಂಬಿಗರ ಚೌಡಯ್ಯ ಸೇರಿದಂತೆ ಶರಣಸತ್ಪುರುಷರು ಯಾವುದೇ ಒಂದು ಜಾತಿಗೆ ಸೀಮಿತರಾಗಿಲ್ಲ, ಮಹಾತ್ಮರು ವಿಶ್ವಮಾನವರು ಅವರ ತತ್ವ ಸಿದ್ಧಾಂತಗಳು ಹಾಗೂ ಸಂದೇಶಗಳು ಮಾನವ ಕುಲಕ್ಕೆ ಸಂಬಂಧಪಟ್ಟಿವೆ ಎಂದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಹೂಗಾರ ಮಾತನಾಡಿ, ಅವಮಾನ ಮಾಡಿದ ನಿಜವಾದ ಕಿಡಿಗೇಡಿಗಳನ್ನು ಪತ್ತೆ ಮಾಡಿ ಶಿಕ್ಷೆ ನೀಡಬೇಕು ಹೊರತು ಯಾವನೋ ಹುಚ್ಚನನ್ನು ತಂದು ಶಿಕ್ಷಿಸಬಾರದು ಎಂದರು. ಘಟನೆ ನಡೆದು ಆರು ದಿನಗಳು ಕಳೆದರೂ ಪೊಲೀಸರು ವಿಳಂಬವೇಕೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಇಟಗಿ ಮಾತನಾಡಿ, ಎಲ್ಲಾ ವಿಷಯಗಳ ಬಗ್ಗೆ ಮಾತನಾಡುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ವಕ್ಷೇತ್ರದಲ್ಲಿಯೇ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿ ಅವಮಾನಿಸಿದ ಘಟನೆ ಬಗ್ಗೆ ಬೆಂಗಳೂರಿನಲ್ಲಿ ಕುಳಿತು ಖಂಡನೆಯ ಹೇಳಿಕೆ ನೀಡಿ ಸುಮ್ಮನಾದರೆ ಹೇಗೆ, ಸ್ಥಳಕ್ಕಾಗಮಿಸಿ ತಕ್ಷಣ ಕಿಡಿಗೇಡಿಗಳನ್ನು ಬಂಧಿಸಲು ಪೊಲೀಸರಿಗೆ ಸೂಚನೆ ನೀಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಮುಖಂಡ ತಮ್ಮಣ್ಣ ಡಿಗ್ಗಿ ಮಾತನಾಡಿ, ಅಂಬಿಗರ ಚೌಡಯ್ಯ ನವರ ಮೂರ್ತಿ ವಿರೂಪಗೊಳಿಸಿ ಅವಮಾನಿಸಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಪುರಸಭೆ ಸದಸ್ಯ ನಾಗರಾಜ್ ಭಂಕಲಗಿ, ಯುವ ಅಧ್ಯಕ್ಷ ದೇವರಾಜ್ ತಳವಾರ, ಶ್ರೀಕಾಂತ್ ಸುಲೇಗಾಂವ, ಚಂದ್ರು ಕಾಳಗಿ, ಶಿವರಾಮ ಚವ್ಹಾಣ, ರಾಜು ರಾಠೋಡ ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!