Oplus_0

ಮುತ್ತಗಾ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ : ಎಂಎಲ್‌ಸಿ ತಳವಾರ ಸಾಬಣ್ಣಾ ಖಂಡನೆ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿ ಅವಮಾನಿಸಿದ ಘಟನೆ ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ತಳವಾರ ಸಾಬಣ್ಣಾ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಇದೇ ವರ್ಷ ಸ್ಥಾಪನೆಯಾಗಿ ಉದ್ಘಾಟನೆಯಾಗಿರುತ್ತದೆ. ಕೆಲವು ಸಮಾಜ ಘಾತಕ ವ್ಯಕ್ತಿಗಳು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಗುರುವಾರ ರಾತ್ರಿ ಭಗ್ನಗೊಳಿಸಿದ್ದಾರೆ. ಮಹಾಪುರುಷರು ಯಾವುದೇ ಒಂದು ಸಮಾಜಕ್ಕೆ ಸೀಮಿತವಾಗಿರುವುದಿಲ್ಲ, ಮಹಾಪುರುಷರನ್ನು ಎಲ್ಲಾ ಸಮಾಜದವರು ಗೌರವಿಸುತ್ತಾರೆ. ಮುತ್ತಗಾ ಗ್ರಾಮದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವುದು ಭಾವನತ್ಮಕವಾಗಿ ಕೋಲಿ-ಕಬ್ಬಲಿಗ ಸಮಾಜಕ್ಕೆ ನೇರವಾಗಿ ದಾಳಿ ಮಾಡಿದಂತಾಗಿದೆ. ಈ ಅನ್ಯಾಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವ ಸಮಾಜ ಘಾತಕ ವ್ಯಕ್ತಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಹಾಗೂ ಜಿಲ್ಲಾಡಳಿತದ ವತಿಯಿಂದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ನಿರ್ಮಾಣ ಮಾಡಿಕೊಡಬೇಕೆಂದು ವಿಧಾನ ಪರಿಷತ್ ಸದಸ್ಯ ಡಾ. ತಳವಾರ ಸಾಬಣ್ಣಾ ಅವರು ಆಗ್ರಹಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!