ಮುತ್ತಗಾ ಅಂಬಿಗರ ಚೌಡಯ್ಯ ಪ್ರತಿಮೆ ಅವಮಾನಿಸಿದ ಕಿಡಿಗೇಡಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿ ಪಡಿಸಲು ನಿಂಬಣ್ಣಪ್ಪ ಮಾಲಿ ಪಾಟೀಲ್ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮಿಗೆ ಅವಮಾನ ಮಾಡರುವ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಎಂದು ವೀರಶೈವ ಲಿಂಗಾಯತ ಯುವ ಸಹ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಜಿಲ್ಲಾ ಉಪಾಧ್ಯಕ್ಷ ನಿಂಬಣ್ಣಪ್ಪ ಮಾಲಿ ಪಾಟೀಲ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಘಟನೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಇದರಲ್ಲಿ ಯಾರೇ ಭಾಗಿಯಾಗಲಿ ರಾಜಕೀಯ ಬದಿಗಿಟ್ಟು ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
12 ಶತಮಾನದ ಶರಣರು ಯಾವುದೇ ಒಂದು ಜಾತಿಗೆ ಸೀಮಿತವಾಗಿಲ್ಲ ಅವರು ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ್ದಾರೆ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಕೆಲವರು ಸಮಾಜದ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ ಇಂತಹದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪೊಲೀಸ್ ಅಧಿಕಾರಿಗಳು ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿ ತನಿಖೆ ಕಾರ್ಯ ಚುರುಕುಗೊಳಿಸಿ ಸಮಾಜ ಘಾತುಕ ವ್ಯಕ್ತಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
