Oplus_0

ಚಿತ್ತಾಪುರಿನ 150 ಬೆಂಬಲಿಗರು ಬೆಂಗಳೂರಿಗೆ ಪ್ರಯಾಣ | ನಾಗರೆಡ್ಡಿ ಪಾಟೀಲ ಕರದಾಳ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವಂತೆ ಬೆಂಬಲಿಗರ ಒತ್ತಾಯ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಶಿಕ್ಷಣ ಪ್ರೇಮಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಡಾ.ಪ್ರಭುರಾಜ ಕಾಂತಾ ಒತ್ತಾಯಿಸಿದರು.

ಪಟ್ಟಣದ ಎಪಿಎಂಸಿಯ ಅಣ್ಣಾರಾವ್ ಪಾಟೀಲ ಅಡತಿಯಲ್ಲಿ ಬುಧವಾರ ನಾಗರೆಡ್ಡಿ ಪಾಟೀಲ ಬೆಂಬಲಿಗರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕಳೆದ 20 ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ನಾಗರೆಡ್ಡಿ ಪಾಟೀಲ ಅವರು, ಸ್ಥಳೀಯವಾಗಿ ಎಲ್ಲರ ಕೈಗೆ ಸುಲಭವಾಗಿ ಸಿಗುವ ಹಾಗೂ ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗುವವರಾಗಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನಾನುರಾಗಿಯಾಗಿದ್ದಾರೆ. ಹೀಗಾಗಿ ಇವರನ್ನು ಎಂಎಲ್ಸಿ ಯಾಗಿ ಮಾಡಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಹಿಂದುಳಿದವರಿಗೆ ಅವಕಾಶ ನೀಡಲಾಗಿದೆ ಹೀಗಾಗಿ ಈ ಬಾರಿ ಮೇಲ್ವರ್ಗದ ನಾಗರೆಡ್ಡಿ ಪಾಟೀಲ ಅವರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಎಂಎಲ್ಸಿ ಸ್ಥಾನಕ್ಕೆ ಅರ್ಹರಾಗಿದ್ದಾರೆ, ಅವರು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ ಹೀಗಾಗಿ ಅವರಿಗೆ ಕೂಲಿ ಕೊಡಬೇಕು ಎಂದು ಆಗ್ರಹಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ, ಹಿರಿಯ ಮುಖಂಡ ನಾಗರೆಡ್ಡಿ ಪಾಟೀಲ ಒಬ್ಬ ನಿಷ್ಠಾವಂತ ಹಾಗೂ ಪ್ರಾಮಾಣಿಕ ನಾಯಕರಾಗಿದ್ದು, 2005 ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ದಿಗ್ಗಾಂವ ಭಾಗದಲ್ಲಿ ಉತ್ತಮ ಜನಪರ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನಮನದಲ್ಲಿ ಶಾಶ್ವತವಾಗಿ ನೆಲೆ ಉರಿದ್ದಾರೆ ಎಂದು ಹೇಳಿದರು.

ಎಲ್ಲ ಕಾರ್ಯಕರ್ತರನ್ನು ಜೊತೆಗೆ ತೆಗೆದುಕೊಂಡು ಹೋಗುವ ನಾಗರೆಡ್ಡಿ ಪಾಟೀಲ ಅವರು ಸ್ಥಳೀಯವಾಗಿ ಎಲ್ಲರಿಗೂ ಸಿಗುತ್ತಾರೆ. ಯಾವುದೇ ಅಪೇಕ್ಷೆ ಇಲ್ಲದೆ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ ಹೀಗಾಗಿ ನೂತನ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಎಂಎಲ್ಸಿ ಹುದ್ದೆ ನೀಡಬೇಕು ಎಂದು ಕಾಂಗ್ರೆಸ್ ಹೈ ಕಮಾಂಡ್ ಗೆ ಮನವಿ ಮಾಡಿದರು.

ಪುರಸಭೆ ಮಾಜಿ ಸದಸ್ಯ ವಿನೋದ್ ಗುತ್ತೇದಾರ ಮಾತನಾಡಿ, ಈ ಭಾಗದ ಕಾಯಕಯೋಗಿಯಾಗಿದ್ದ ನಾಗರೆಡ್ಡಿ ಪಾಟೀಲ ಅವರು ತಮ್ಮ ಪರಿಶ್ರಮದಿಂದ ಮೇಲೆ ಬಂದವರಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಹೀಗಾಗಿ ಇವರ ಸೇವೆಯನ್ನು ಗುರುತಿಸಿ ಎಂಎಲ್ಸಿ ನಾಮನಿರ್ದೇಶನ ಮಾಡುವಂತೆ ಒತ್ತಾಯಿಸಿ ಚಿತ್ತಾಪುರ ಕ್ಷೇತ್ರದಿಂದ 150 ಅಧಿಕ ಬೆಂಬಲಿಗರು ಬೆಂಗಳೂರಿಗೆ ಬುಧವಾರ ಪ್ರಯಾಣ ಬೆಳೆಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭೇಟಿ ನೀಡಿ ಮನವಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ನ್ಯಾಯವಾದಿ ಎಸ್.ಎನ್.ಪಾಟೀಲ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಚಂದ್ರಶೇಖರ ಸಾತನೂರ, ಸುವನರೆಡ್ಡಿ, ಶ್ರೀನಿವಾಸ ರೆಡ್ಡಿ ಪಾಲಪ್, ಶಾಮ್ ಮುಕ್ತೇದಾರ, ಶಿವರಾಜ್ ಪಾಳೇದ್, ಸಂತೋಷ ಚೌದರಿ, ನಾಗು ಕಲ್ಲಕ್, ಅನೀಲ್ ವಡ್ಡಡಗಿ, ರವಿ ಗೊಬ್ಬುರ್, ನೀಲಕಂಠ ಕರದಾಳ, ರವಿ ಸಾಗರ ಹೊಸಮನಿ, ರಾಮು ಗಡ್ಡಿಮನಿ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!