ಚಿತ್ತಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ತಡೆಯಾಜ್ಞೆ ಆದೇಶವನ್ನು ಸ್ವಾಗತಿಸಿ ಚುನಾವಣೆ ಎದುರಿಸಿ, ನಾಗರೆಡ್ಡಿ ಪಾಟೀಲ ವಿರುದ್ಧ ಟೀಕೆ ಮಾಡುವ ಯೋಗ್ಯತೆ ರವೀಂದ್ರ ಸಜ್ಜನಶೆಟ್ಟಿ ಅವರಿಗಿಲ್ಲ: ಕಾಳಗಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ನಿರ್ದೇಶಕರ ಚುನಾವಣೆಗೆ ನ್ಯಾಯಲಯ ತಡೆಯಾಜ್ಞೆ ನೀಡಿದ್ದು, ಇದು ಸಂವಿಧಾನ ಪ್ರಕಾರ ಸದರಿ ಆದೇಶವನ್ನು ಪ್ರತಿಯೊಬ್ಬರು ಸ್ವಾಗತಿಸಿ ಚುನಾವಣೆ ಎದುರಿಸಬೇಕು ಆದರೆ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಅವರು ಕಾಂಗ್ರೇಸ್ ನಾಯಕರ ಮೇಲೆ ಮಾಡಿದ ವೈಯಕ್ತಿಕ ಟೀಕೆಯನ್ನು ಖಂಡಿಸುತ್ತೇವೆ, ನಾಗರೆಡ್ಡಿ ಪಾಟೀಲ ಕರದಾಳ ಅವರ ಬಗ್ಗೆ ವೈಯಕ್ತಿಕ ಟೀಕೆ ಮಾಡುವ ಯೋಗ್ಯತೆ ರವೀಂದ್ರ ಸಜ್ಜನಶೆಟ್ಟಿ ಅವರಿಗೆ ಇಲ್ಲ ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಮಲ್ಲಿಕಾರ್ಜುನ ಕಾಳಗಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಬಗ್ಗೆ ಸಹಕಾರ ಇಲಾಖೆ ಹಾಗೂ ನ್ಯಾಯಲಯ ನಿರ್ಧರಿಸುತ್ತದೆ. ಇದು ರಾಜಕೀಯ ರಹಿತ ಚುನಾವಣೆಯಾಗಿರುವುದರಿಂದ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ, ರವೀಂದ್ರ ಸಜ್ಜನಶೆಟ್ಟಿ ರವರು ಬಿಜೆಪಿ ತಾಲೂಕು ಅಧ್ಯಕ್ಷರಾಗಿರುವುದನ್ನು ಸ್ವತಃ ಬಿಜೆಪಿಯವರೇ ವಿರೋಧಿಸುತ್ತಿದ್ದಾರೆ. ಕಾಂಗ್ರೇಸ್ ಹಿರಿಯ ಮುಖಂಡ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಅವರ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದನ್ನು ಬಿಟ್ಟು ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.
ಕಾಂಗ್ರೆಸ್ ನವರಿಗೆ ಸೂಚಕರು ಸಿಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದ ಸಜ್ಜನಶೆಟ್ಟಿ ರವರ ಹತ್ತಿರ ಏನಾದರು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ, ನಾಗರೆಡ್ಡಿ ಪಾಟೀಲ ಕರದಾಳ ಅವರು ಅಜಾತ ಶತ್ರು ತಮ್ಮದೆ ಆದಂತಹ ವರ್ಚಸ್ಸನ್ನು ಬೆಳೆಸಿಕೊಂಡಿದ್ದಾರೆ ಅವರ ಬಗ್ಗೆ ಟೀಕೆ ಮಾಡುವುದು ಸಜ್ಜನಶೆಟ್ಟಿ ಅವರಿಗೆ ಎಷ್ಟು ಮಟ್ಟಿಗೆ ಸರಿ ಎಂಬುದನ್ನು ಆತ್ಮ ವಿಮರ್ಶೆ ಮಾಡಿಕೊಳ್ಳಲ್ಲಿ ಎಂದು ಕಿವಿಮಾತು ಹೇಳಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಿಂದಿನ ಅಧ್ಯಕ್ಷ ಬಸವರಾಜ ಸಂಗಾವಿ ಸಾವನಪ್ಪಿ ಹಲವು ವರ್ಷಗಳೇ ಕಳೆದಿವೆ. ಸತ್ತವರ ಮೇಲೆ ರಾಜಕೀಯ ಮಾಡುವುದು ಬಿಜೆಪಿ ಯವರ ಜಾಯಮಾನವಾಗಿದೆ, ಕಳೆದ ಅವಧಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇತ್ತು ತನಿಖೆ ಮಾಡಬಹುದಿತ್ತಲವೇ, ಇಂತಹ ಸುಳ್ಳು ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಚುನಾವಣೆಯ ಫಲಿತಾಂಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದನ್ನು ಮನಗಂಡು ಸಂವಿಧಾನಕ್ಕೆ ಮಹತ್ವ ನೀಡಿ ಗೌರವದಿಂದ ಚುನಾವಣೆ ಎದುರಿಸಲು ಸಿದ್ಧರಾಗಿ ಎಂದು ತಿಳಿಸಿದ್ದಾರೆ.