Oplus_0

ನಾಗಾವಿ ಯಲ್ಲಮ್ಮ ದೇವಸ್ಥಾನ, ಪುರಾತತ್ವ ಇಲಾಖೆಯ ಸ್ಥಳಗಳಿಗೆ ಜಿಲ್ಲಾಧಿಕಾರಿ ಇಕ್ರಾಮುಲ್ಲಾ ಶರೀಫ್ ಭೇಟಿ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಐತಿಹಾಸಿಕ ನಾಗಾವಿ ಯಲ್ಲಮ್ಮ ದೇವಸ್ಥಾನಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಾಮುಲ್ಲಾ ಶರೀಫ್ ಮಂಗಳವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ನಂತರ 60 ಕಂಬದ ದೇವಸ್ಥಾನ, ನಂದಿ ಬಾವಿ ಮತ್ತು ಸುತ್ತಲಿನ ದೇವಸ್ಥಾನಗಳಿಗೆ ಹಾಗೂ ಪುರಾತತ್ವ ಇಲಾಖೆಯ ಸ್ಥಳಗಳಿಗೆ ಭೇಟಿ ನೀಡಿದರು. ಪುರಾತತ್ವ ಇಲಾಖೆಯಿಂದ ನಡೆಯುತ್ತಿರುವ ಜಿರ್ಣೋದ್ದಾರ ಕಾಮಗಾರಿಗಳ ನೀಲ ನಕ್ಷೆ (blue print) ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ಕಲಬುರಗಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ,  ತಹಸೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಪುರಸಭೆ ಮುಖ್ಯಧಿಕಾರಿ ಭಾರತಿ ದಂಡೋತಿ,  ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಇದಕ್ಕೂ ಮುನ್ನ ಕಾಳಗಿಯ ನೀಲಕಂಠ ಕಾಳೇಶ್ವರ ಹಾಗೂ ಸೂರ್ಯನಾರಾಯಣ ದೇವಾಲಯಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯ ಪರಿಶೀಲನೆ ನಡೆಸಿದರು. ನಂತರ ಸನ್ನತಿ, ಕನಗನಹಳ್ಳಿ ಪುರಾತತ್ವ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!