Oplus_131072

ಚಿತ್ತಾಪುರ ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವದ ನಿಮಿತ್ತ ಸೆ.20 ರಂದು ಪೂರ್ವಭಾವಿ ಸಭೆ: ತಹಸೀಲ್ದಾರ್

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಟ್ಟಣದ ಐತಿಹಾಸಿಕ ಶ್ರೀ ನಾಗಾವಿ ಯಲ್ಲಮ್ಮ ದೇವಸ್ಥಾನದ ಪಲ್ಲಕ್ಕಿ ಮಹೋತ್ಸವ (ಜಾತ್ರೆಯು) ಅಕ್ಟೋಬರ್ 7 ರಂದು ಜರುಗಲಿರುವ ಪ್ರಯುಕ್ತ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೆ.20 ರಂದು ಬೆಳಗ್ಗೆ 11.30 ಕ್ಕೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷರು, ತಹಸೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.

ಸದರಿ ಸಭೆಗೆ ಪುರಸಭೆ ಮುಖ್ಯಾಧಿಕಾರಿ ಹಾಗೂ ಎಲ್ಲಾ ಸದಸ್ಯರು, ಲೋಕೋಪಯೋಗಿ ಇಲಾಖೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಜೆಸ್ಕಾಂ ಸಹಾಯಕ ಕಾರ್ಯಾನಿರ್ವಾಹಕ ಅಭಿಯಂತರರು, ಆರಕ್ಷಕ ವೃತ್ತ ನಿರೀಕ್ಷಕರು, ಆರಕ್ಷಕ ಉಪ-ನಿರೀಕ್ಷಕರು, ಅಗ್ನಿಶಾಮಕ ಠಾಣಾಧಿಕಾರಿಗಳು, ರತ್ನಾಕರ ನಾಯಕ ಸರಾಫ್, ಗೌತಮ ರಾಮರಾವ ನಾಯಕ, ದೇವಸ್ಥಾನದ ಅರ್ಚಕರು ಸೇರಿದಂತೆ ಎಲ್ಲ ಸಮಾಜಗಳ ಅಧ್ಯಕ್ಷರು ಹಾಗೂ ಮುಖಂಡರು ಭಾಗವಹಿಸಿ ಪಲ್ಲಕ್ಕಿ ಮಹೋತ್ಸವ ಬಗ್ಗೆ ಸಲಹೆ ಸೂಚನೆಗಳು ನೀಡಬೇಕು ಎಂದು ಕೋರಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!