ನಾಳೆ ಚಿತ್ತಾಪುರ ಪುರಸಭೆ ಸಾಮಾನ್ಯ ಸಭೆ: ಗುರಿಕಾರ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಾ.25 ರಂದು ಬೆಳಗ್ಗೆ 11 ಗಂಟೆಗೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್ ಅಧ್ಯಕ್ಷತೆಯಲ್ಲಿ ಪ್ರಥಮ ಸಾಮಾನ್ಯ ಸಭೆ ನಡೆಯಲಿದೆ ಎಂದು ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ತಿಳಿಸಿದ್ದಾರೆ. ಪುರಸಭೆಯ ಎಲ್ಲಾ ಸದಸ್ಯರು ಸರಿಯಾದ ಸಮಯಕ್ಕೆ ಹಾಜರಾಗಬೇಕು ಎಂದು ಕೋರಿದ್ದಾರೆ.
ಸಭೆಯಲ್ಲಿ ಅಧ್ಯಕ್ಷರ ಅನುಮೋದನೆಯಂತೆ ಈ ಕೆಳಗಿನ ವಿಷಯಗಳನ್ನು ಚರ್ಚಿಸಲಾಗುವುದು. 2025-ಫೆಬ್ರವರಿ ತಿಂಗಳ ಪುರಸಭೆ ನಿಧಿಯ ಆದಾಯದ ವಿವರ, 2025-26ನೇ ಸಾಲಿಗಾಗಿ ಆಸ್ತಿ ತೆರಿಗೆ ಪರಿಷ್ಕರಣೆ ಕುರಿತು, ಬೀದಿ ದೀಪ ನಿರ್ವಹಣೆಯ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು, ತಂಬಾಕು ವ್ಯಾಪಾರಕ್ಕೆ ಪ್ರತ್ಯೇಕ ಪರವಾನಿಗೆ ನೀಡುವ ಬಗ್ಗೆ. ಇನ್ನಿತರ ವಿಷಯಗಳು ಅಧ್ಯಕ್ಷರ ಅಪ್ಪಣೆಯ ಮೇರೆಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.