Oplus_0

ನಾಳೆ ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಗಾವಿ ಎಕ್ಸಪ್ರೆಸ್

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಬುರ್ಗಿಯ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ

ನಮ್ಮ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ನಾಗಮಂಗಲ ಪ್ರಕರಣಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಅಮಾನತ್ತು

ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯವ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್ ಪೆಕ್ಟರ್ ನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟ, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!