ನಾಳೆ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು: ಗುತ್ತೇದಾರ ಮನವಿ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ (ತ್ರಿಪುರ ವಾಸಿನಿ) ನಾಳೆ ಜು.21 ರಂದು ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ರವರ ಅಧಿಕಾರ ಪದಗ್ರಹಣ ಸಮಾರಂಭ ಕೆಪಿಸಿಸಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಈ ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು, ಲೋಕಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ಮುಂಚೂಣಿ ಘಟಕ/ವಿಭಾಗ/ಸೆಲ್‌ಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು. ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾದ ಹಾಲಿ ಹಾಗೂ ಮಾಜಿ ಎಲ್ಲಾ ಚುನಾಯಿತ ಸದಸ್ಯರುಗಳು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

