Oplus_0

ಸರಕಾರಿ ನೌಕರರ ದಿನಾಚರಣೆ ನಿಮಿತ್ತ ನಾಳೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ: ಬಳೂಂಡಗಿ 

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಜಿಲ್ಲಾಡಳಿತ ಕಲಬುರಗಿ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಹಯೋಗದಲ್ಲಿ ನಾಳೆ (ಅ.31) ಬೆಳಿಗ್ಗೆ 10.30 ಕ್ಕೆ ನಗರದ ಪಂಡಿತ ರಂಗಮಂದಿರದಲ್ಲಿ 2025 ನೇ ಸಾಲಿನ ಜಿಲ್ಲಾಮಟ್ಟದ ಸರ್ಕಾರಿ ನೌಕರರ ದಿನಾಚರಣೆ ಅಂಗವಾಗಿ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐಟಿಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟನೆ ನೆರವೇರಿಸುವರು. ಸದರಿ ಕಾರ್ಯಕ್ರಮ ಪ್ರಾರಂಭದಲ್ಲಿ 371 ಜೆ ನಿಯಮಾವಳಿಗಳ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು, ಡಾ. ರಜಾಕ್ ಉಸ್ತಾದ ರಾಯಚೂರ ರವರು ಉಪನ್ಯಾಸ ನೀಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಸಂಸದರು, ರಾಜ್ಯಸಭೆ, ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ತು ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು,  ಮಹಾಪೌರರು ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ರವರು ಭಾಗವಹಿಸಲಿದ್ದಾರೆ. ಅದಕ್ಕಾಗಿ ಕಾರ್ಯಕ್ರಮದ ಯಶಸ್ವಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಅಧಿಕಾರಿಗಳು, ನೌಕರರು ಭಾಗವಹಿಸಬೇು ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಸುರೇಶ ಶರ್ಮಾ, ಶ್ರೀಮಂತ ಪಟೇದಾರ, ಮಹೇಶ ಹೂಗಾರ, ಧರ್ಮರಾಯ ಜವಳಿ, ಚಂದ್ರಕಾಂತ ಏರಿ, ಎಮ್.ಬಿ ಪಾಟೀಲ, ಸುರೇಶ ವಗ್ಗೆ, ನಿಜಲಿಂಗಪ್ಪ ಕೋರಳ್ಳಿ, ಸಿದ್ದಲಿಂಗಯ್ಯ ಮಠಪತಿ ಇತರರು ಉಪಸ್ಥಿತರಿರುವರು.

Spread the love

Leave a Reply

Your email address will not be published. Required fields are marked *

error: Content is protected !!