Oplus_0

ನಾಲವಾರ ಶ್ರೀ ಕೋರಿಸಿದ್ದೇಶ್ವರ ಮಠದಲ್ಲಿ ಸಿದ್ದತೋಟೇಂದ್ರ ಸ್ವಾಮೀಜಿ ಸಂಬಂಧಿ ಆತ್ಮಹತ್ಯೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದ್ದು ಮಂಗಳವಾರ ಬೆಳಿಗ್ಗೆ ಬಹಿರಂಗಗೊಂಡಿದೆ.

ಗುಂಡು ಹಿರೇಮಠ (35) ಮಠದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮಠದ ಕೊಠಡಿಯೊಂದರಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಮೃತ ಗುಂಡು ಮಠದ ಪೀಠಾಧಿಪತಿ ಪೂಜ್ಯ ಶ್ರೀ ಸಿದ್ದತೋಟೇಂದ್ರ ಶಿವಾಚಾರ್ಯ ಅವರ ದೂರದ ಸಂಬಂಧಿ ಎನ್ನಲಾಗಿದ್ದು, ಒಂದು ವರ್ಷದ ಹಿಂದೆ ಮದುವೆಯಾಗಿತ್ತು. ಪೂಜ್ಯರ ಸೇವೆ ಮಾಡುತ್ತ ಮಠದಲ್ಲೇ ವಾಸವಿದ್ದರು ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ ಹಾಗೂ ವಾಡಿ ಠಾಣೆ ಪಿಎಸ್‌ಐ ಕೆ.ತಿರುಮಲೇಶ ಭೇಟಿ ನೀಡಿದ್ದಾರೆ. ವಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ಗುಂಡು ಹಿರೇಮಠ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ, ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Leave a Reply

Your email address will not be published. Required fields are marked *

error: Content is protected !!