ನಾಲವಾರ ವಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯತ್ವದ ಸಂಖ್ಯೆ ಹೆಚ್ಚಿಸುವ ಸಂಕಲ್ಪ ಮಾಡಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಪದಾಧಿಕಾರಿಗಳು ಹಾಗೂ ಸದಸ್ಯರು, ಈ ಭಾಗದ ಹೆಚ್ಚಿನ ಸಂಖ್ಯೆಯ ಕನ್ನಡ ಅಭಿಮಾನಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರನ್ನಾಗಿ ಮಾಡುವ ಮೂಲಕ ಸದಸ್ಯತ್ವದ ಸಂಖ್ಯೆಯನ್ನು ಹೆಚ್ಚಿಸುವ ಸಂಕಲ್ಪ ಮಾಡಬೇಕು ಎಂದು ಕಸಾಪ ವಲಯ ಅಧ್ಯಕ್ಷ ಅಂಜುನಾಥ ಎಸ್ ನಾಯ್ಕಲ್ ನಾಲವಾರ ಮತ್ತು ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಜಂಟಿಯಾಗಿ ತಿಳಿಸಿದ್ದಾರೆ.
ಆದಷ್ಟು ಬೇಗ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯತ್ವವನ್ನು ಈ ಪೋನ್ ಸಂಖ್ಯೆ 7829385388 ರವಿ ಮಠದ ಕಿಸಾನ್ ಆಗ್ರೋ ಕೇಂದ್ರ ನಾಲವಾರದಲ್ಲಿ ಆನ್‌ಲೈನ್ ಮೂಲಕ ಪಡೆದು, ತಮ್ಮ ಸದಸ್ಯತ್ವದ ಗುರುತಿನ ಚೀಟಿಯನ್ನು (ಐಡಿ ಕಾರ್ಡ್) ಪಡೆಯಬೇಕು ಎಂದು ಮಾಹಿತಿ ನೀಡಿದ್ದಾರೆ.
ಕನ್ನಡ ನಾಡು, ಕನ್ನಡ ಭಾಷೆ, ಕನ್ನಡ ಸಾಹಿತ್ಯ ಮತ್ತು ಕನ್ನಡ ಸಂಸ್ಕೃತಿಯ ಸೇವೆ ಮಾಡಲು ನಾವೆಲ್ಲರೂ ಸಂಕಲ್ಪ ಮಾಡೋಣ. ನಮ್ಮ ಕನ್ನಡ ನಾಡಿನ ಜಲ, ನೆಲ, ಭಾಷೆ ಹಾಗೂ ಸಂಸ್ಕೃತಿಗೆ ಯಾವುದೇ ಧಕ್ಕೆ ಬಾರದಂತೆ ಜಾಗೃತರಾಗೋಣ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು, ಕನ್ನಡದ ಬೆಳವಣಿಗೆಗಾಗಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸುವ ಸಂಕಲ್ಪವನ್ನು ನಾವೆಲ್ಲರೂ ಮಾಡೋಣ ಎಂದು ಕರೆ ನೀಡಿದ್ದಾರೆ.
ಬನ್ನಿ… ಕನ್ನಡಕ್ಕಾಗಿ ಕೈಜೋಡಿಸೋಣ, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಹೆಚ್ಚಿಸೋಣ. ಕನ್ನಡದ ಸೇವೆಗೆ ನಮ್ಮನ್ನು ನಾವು ಅರ್ಪಿಸೋಣ ಎಂದು ನಾಲವಾರ ವಲಯ ಕಸಾಪ ಅಧ್ಯಕ್ಷ ಅಂಜುನಾಥ ಎಸ್ ನಾಯ್ಕಲ್ ನಾಲವಾರ ಮತ್ತು ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಜಂಟಿಯಾಗಿ ತಿಳಿಸಿದ್ದಾರೆ.

