ನಮ್ಮ ಕರ್ನಾಟಕ ಸೇನೆಯ ಚಿತ್ತಾಪುರ ತಾಲೂಕು ಅಧ್ಯಕ್ಷರಾಗಿ ಸುನೀಲ್ ಗುತ್ತೇದಾರ, ವಾಡಿ ಅಧ್ಯಕ್ಷರಾಗಿ ಸಿದ್ದು ಪೂಜಾರಿ ನೇಮಕ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ ಪಡುಕೋಟೆ ಅವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಸುಧೀಂದ್ರ ಇಜೇರಿ ಯವರ ನೇತೃತ್ವದಲ್ಲಿ ಚಿತ್ತಾಪುರ ತಾಲೂಕು ಅಧ್ಯಕ್ಷರಾಗಿ ಸುನೀಲ್ ಗುತ್ತೇದಾರ, ವಾಡಿ ಘಟಕದ ಅಧ್ಯಕ್ಷರಾಗಿ ಸಿದ್ದು ಎಸ್. ಪೂಜಾರಿ, ತಾಲೂಕು ಸಂಘಟನಾ ಸಂಚಾಲಕರಾಗಿ ಅಂಬರೇಷ್ ಮಾಳಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಚಿತ್ತಾಪುರ ತಾಲೂಕಿನಲ್ಲಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ಸಾಮಾಜಿಕ ಕಳಕಳಿಯೊಂದಿಗೆ ಕಾನೂನಿನ ಚೌಕಟ್ಟಿನಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ನಮ್ಮ ಕರ್ನಾಟಕ ಸೇನೆಯ ನಿಯಮಾವಳಿಯ ಪ್ರಕಾರ ನೇಮಕ ಮಾಡಲಾಗಿದೆ.
ರಾಜ್ಯಾಧ್ಯಕ್ಷರ ಆದೇಶದ ಪ್ರಕಾರ ಬರುವ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ತಾಲೂಕಿನಲ್ಲಿ ಜನಸಾಮಾನ್ಯರ ಧ್ವನಿಯಾಗಿ ಹಾಗೂ ಕನ್ನಡ ತಾಯಿಯ ಸೇವೆ ಸಲ್ಲಿಸಲಾಗುವುದು ಎಂದು ತಾಲೂಕು ಅಧ್ಯಕ್ಷ ಸುನೀಲ್ ಗುತ್ತೇದಾರ ತಿಳಿಸಿದ್ದಾರೆ.