Oplus_0

ನಂದೂರು ಕೆ. ಗ್ರಾಮದಲ್ಲಿ 6126.45 ಲಕ್ಷ ರೂ. ವೆಚ್ಚದ ಹೊಸ ಕೈಗಾರಿಕಾ ವಸಾಹತು ಸ್ಥಾಪನೆ: ಸಚಿವ ಪ್ರಿಯಾಂಕ್‌ ಖರ್ಗೆ 

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಜಿಲ್ಲೆಯ ನಂದೂರು ಕೆ. ಗ್ರಾಮದಲ್ಲಿ 6126.45 ಲಕ್ಷ ರೂ. ವೆಚ್ಚದಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಂಯುಕ್ತವಾಗಿ ಶೇ.50ರ ಅನುಪಾತದಲ್ಲಿ ಈ ವೆಚ್ಚವನ್ನು ಭರಿಸಲಿದೆ. ಈ ಪ್ರದೇಶವು ಹಿಂದುಳಿದ ಪ್ರದೇಶವಾಗಿದ್ದು, ಉದ್ದೇಶಿತ ಕೈಗಾರಿಕಾ ವಸಾಹತು ಸ್ಥಾಪನೆಯಿಂದ ಈ ಭಾಗದ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಲಭಿಸಲಿದೆ, ಈ ಮೂಲಕ ಕೈಗಾರಕೀಕರಣ ಹಾಗೂ ಕೈಗಾರಿಕೆಯಲ್ಲಿ ಸಬಲೀಕರಣಗೊಳ್ಳಲು ಸಹಾಯಕವಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಶಯ ವ್ಯಕ್ತಪಡಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!