Oplus_0

ನವ ಕರ್ನಾಟಕ ರೈತ ಸಂಘದ ಚಿತ್ತಾಪುರ ತಾಲೂಕು ಅಧ್ಯಕ್ಷರಾಗಿ ವಿಶ್ವನಾಥ ಡೋಣಗಾಂವ ನೇಮಕ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ನವ ಕರ್ನಾಟಕ ರೈತ ಸಂಘದ ಚಿತ್ತಾಪುರ ತಾಲೂಕು ಅಧ್ಯಕ್ಷರನ್ನಾಗಿ ವಿಶ್ವನಾಥ ಅರ್ಜುನಪ್ಪ ಡೋಣಗಾಂವ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ದಯಾನಂದ ಸಿ. ಪಾಟೀಲ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ನಮ್ಮ ರೈತ ಸಂಘದ ತತ್ವ ಸಿದ್ಧಾಂತಗಳು, ವಿಚಾರಧಾರೆಗಳನ್ನು ಚಾಚು ತಪ್ಪದೆ ಪಾಲನೆ ಮಾಡಬೇಕು, ಕಾಯಾ, ವಾಚಾ, ಮನಸಾ ಪೂರ್ವಕವಾಗಿ ರೈತ ಪರವಾಗಿ ಕ್ರೀಯಾಶೀಲವಾದ ಕೆಲಸ ಮಾಡಬೇಕು ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ರೈತರಿಗೆ ನ್ಯಾಯ ಒದಗಿಸಿಕೊಡುವ ಕಾರ್ಯದಲ್ಲಿ ಪರಿಣಾಮಕಾರಿಯಾದ ಪಾತ್ರ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!