ಚಿತ್ತಾಪುರ: ನಾಯಿಗಳ ದಾಳಿಗೆ 25 ಕುರಿಗಳು ಬಲಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಯರಗಲ್ ರಸ್ತೆಯ ಪುರಸಭೆ ಘನತ್ಯಾಜ್ಯ ವಿಲೇವಾರಿ ಘಟಕದ ಹತ್ತಿರ ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳು ದಾಳಿ ಮಾಡಿದ್ದರಿಂದ 25 ಕುರಿಗಳು ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಪಟ್ಟಣದ ಬಾಹರಪೇಟ್ ನಿವಾಸಿ ಶಿವು ಮರೆಪ್ಪ ಘಾಣಗಾಪೂರ ಇತನಿಗೆ ಸೇರಿದ ಕುರಿಗಳೇ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಪಶು ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸರ್ಕಾರದಿಂದ ಸಿಗುವ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

