ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿ ಬಾಬುರಾವ್ ಚಿಂಚನಸೂರ ನೇಮಿಸಿ ಸರ್ಕಾರ ಅಧಿಸೂಚನೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಕರ್ನಾಟಕ ಸರ್ಕಾರದ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವರನ್ನು ನೇಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.
ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರನ್ನು The Companies Act, 2013 Schedule-l ರಡಿ ರಚಿಸಿರುವ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ Articles of Association ರ ಕಂಡಿಕೆ-28(i) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.