Oplus_131072

ಒಳ ಮೀಸಲಾತಿಗಾಗಿ ಆಗಸ್ಟ್ 1 ರಂದು ಯಾದಗಿರಿ ನಗರದಲ್ಲಿ ಬೃಹತ್ ಪ್ರತಿಭಟನೆ: ದೇವಿಂದ್ರನಾಥ ನಾದ್ 

ನಾಗಾವಿ ಎಕ್ಸಪ್ರೆಸ್ 

ಯಾದಗಿರಿ: ಮಾದಿಗರಿಗೆ ಒಳ ಮೀಸಲಾತಿ ಜಾರಿಗಾಗಿ ಮೂರುವರೆ ದಶಕಗಳಿಂದ ಹೋರಾಟ ನಡೆಸಿದರೂ ರಾಜ್ಯ ಸರ್ಕಾರ ನೀಡುತ್ತಿಲ್ಲ. ಪ್ರಸ್ತುತ ಸಿಎಂ ಸಿದ್ದರಾಮಯ್ಯ ಮಾದಿಗರಲ್ಲಿ ಗೊಂದಲ ಸೃಷ್ಟಿಸುತ್ತ ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಆಗಸ್ಟ್ 1 ನಗರದಲ್ಲಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಅಲೆಮಾರಿ ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ರಾಜ್ಯ ಮಾದಿಗ ಸಮಾಜದ ಮುಖಂಡ ದೇವಿಂದ್ರನಾಥ ನಾದ್ ಹೇಳಿದರು.

ಸೈದಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾಜದ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಮೊದಲ ಅಧಿವೇಶನದಲ್ಲಿಯೇ ಜಾರಿಗೆ ತರುತ್ತೇನೆ ಎಂದು ಸುಳ್ಳು ಹೇಳುತ್ತಾ ದಲಿತರಲ್ಲಿ ಜಗಳ ಹಚ್ಚುವ ಕೆಲಸ ಹಾಗೂ ಮೋಸ ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಬಂದಿವೆ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಆದೇಶ ನೀಡಿ ಆಗಸ್ಟ್ 1 ಆದೇಶ ನೀಡಿ ಒಂದು ವರ್ಷ ಗತಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮಾಡದೆ ಮಾದಿಗರಲ್ಲಿ ತಾಳ್ಮೆ ಕಟ್ಟೆ ಒಡೆದಿದೆ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಜವಾಬ್ದಾರಿ ಎಂದು ಹೇಳಿದರು.

ನಗರಸಭೆ ಸದಸ್ಯ ಹಣಮಂತ ಇಟಗಿ, ನ್ಯಾಯವಾದಿಗಳಾದ ಚೆನ್ನಯ್ಯ ಮ್ಯಾಳಿಕೇರಿ, ನಿಂಗಪ್ಪ ವಡ್ನಳ್ಳಿ, ಆಂಜನೇಯ ಬಬಲಾದಿ, ಚಂದ್ರಶೇಖರ್ ಕಡೆಸೂರ್, ಸಂಜೀವಪ್ಪ ರಾಜು ಕೂಡ್ಲೂರ್, ಭಿಮಾಸೆಪ್ಪ್ ನರಸಪ್ಪ ನೀಲಳ್ಳಿ, ಮಲ್ಲಿಕಾರ್ಜುನ ಕೊಡ್ಲೂರ್, ಸಾಗರ್ ಮೌನೇಶ್, ಸಹದೇವ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!