ಒಳ ಮೀಸಲಾತಿ ಮರುಪರಿಶೀಲಿಸುವಂತೆ ಮಾಜಿ ಸಂಸದ ಉಮೇಶ್ ಜಾಧವ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಒಳ ಮೀಸಲಾತಿ ಹಂಚಿಕೆಯನ್ನು ವೈಜ್ಞಾನಿಕ ಮತ್ತು ಅಂಕಿ-ಅಂಶಗಳ ಆಧಾರದ ಮೇಲೆ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿ ಕಲಬುರಗಿ ಮಾಜಿ ಸಂಸದ ಡಾ. ಉಮೇಶ್ ಜಾಧವ್ ಅವರು ವಿವಿಧ ಸಮಾಜದ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರನ್ನು ಬೇಟಿಯಾಗಿ ಮನವಿ ಸಲ್ಲಿಸಿದರು.
ಲಂಬಾಣಿ (ಬಂಜಾರ), ಭೋವಿ, ಕೊರಮ ಹಾಗೂ ಕೊರಚ ಸಮುದಾಯಗಳ ಪರವಾಗಿ ಪ್ರವರ್ಗ–‘ಸಿ’ ರೋಸ್ಟರ್ ಬಿಂದುಗಳ ಸ್ಥಾನ ಬದಲಾವಣೆ ಹಾಗೂ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಯನ್ನು ಪುನರ್ ಪರಿಶೀಲಿಸುವಂತೆ ವಿವಿಧ ಸಮುದಾಯಗಳ ಪರವಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಅದ್ಯಕ್ಷ ಶಂಕರ ಪವಾರ, ಬಂಜಾರ ಸಮಾಜ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.

