Oplus_0

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ: ಸಿದ್ದರಾಮಯ್ಯ

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಪೊಲೀಸ್‌ ಸಂಸ್ಮರಣಾ ದಿನದ ಅಂಗವಾಗಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಜನರ ಪ್ರಾಣ, ಆಸ್ತಿ ರಕ್ಷಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಸಲು ಸರ್ಕಾರ ಬದ್ಧವಾಗಿದೆ ಎಂದರು.

2025 ರಲ್ಲಿ 10 ಸಾವಿರ ಪೊಲೀಸ್‌ ವಸತಿ ಮನೆಗಳ ನಿರ್ಮಾಣಕ್ಕೆ ₹2,000 ಕೋಟಿ ನೀಡಿದ್ದೇವೆ. ₹200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಾ, ಅವರ ಕುಟುಂಬಗಳಿಗೆ ಸಂತಾಪ ಸೂಚಿಸಲು ಬಯಸುತ್ತೇನೆ. ದೇಶದ, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ, ಜನರ ಪ್ರಾಣ, ಮಾನ ಕಾಪಾಡುವ ಪವಿತ್ರ ಕಾರ್ಯದಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ. ಮಾನ ಕಾಪಾಡುವ ಪವಿತ್ರ ಕಾರ್ಯದಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದು ಸ್ಮರಿಸಿದರು.

ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದರು.

ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ಧವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದು ಹೇಳಿದರು.

ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದರು. ಈ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ‌ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!