ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಬಸವ ನಗರದ ಶಾಲೆಯ ವಿದ್ಯಾರ್ಥಿ ಭಾಗ್ಯಶ್ರೀ ಗೆ ತಹಸೀಲ್ದಾರ್ ಅವರಿಂದ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಗಣರಾಜ್ಯೋತ್ಸವದ ಅಂಗವಾಗಿ ತಾಲೂಕು ಆಡಳಿತ ವತಿಯಿಂದ ಚಿತ್ತಾಪುರ ಪಟ್ಟಣದ ಪೂರ್ವ ಮತ್ತು ಪಶ್ಚಿಮ ಶಾಲೆಗಳ ಮಕ್ಕಳಿಗಾಗಿ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಬಸವನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಸಾಯಬಣ್ಣ ಪ್ರಥಮ ಸ್ಥಾನ ಪಡೆದುಕೊಂಡಿದ್ದರಿಂದ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಪ್ರಮಾಣ ಪತ್ರ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಸಿಪಿಐ ಚಂದ್ರಶೇಖರ ತಿಗಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಾಧನೆಗೆ ಶಾಲೆಯ ಮುಖ್ಯ ಗುರು ವೀರಸಂಗಪ್ಪ ಸುಲೇಗಾoವ ಸೇರಿದಂತೆ ಸಿಬ್ಬಂದಿ ವರ್ಗ ಮತ್ತು ಎಸ್ಡಿಎಂಸಿ ಅಧ್ಯಕ್ಷರು ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಅಚ್ಚು ಕಟ್ಟಾಗಿ ಸ್ಪರ್ಧೆಗಳನ್ನು ಆಯೋಜಿಸಿದ ಕ್ಷೇತ್ರ ದೈಹಿಕ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶ್ರೀ ಶಿವಶರಣಪ್ಪ ಮಂಠಾಳೆ ಸರ್ ಅವರಿಗೆ ಅಭಿನಂದನೆಗಳು ಸಲ್ಲಿಸಿದ್ದಾರೆ.