ಪ್ರಾರ್ಥನಾ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ | ದೇಶದ ಭವಿಷ್ಯ ನಿರ್ಮಾಣ ಮಾಡುವ ಶಕ್ತಿ ಶಿಕ್ಷಕರಲ್ಲಿದೆ: ಬೆಣ್ಣೂರಕರ್
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಅನಾದಿ ಕಾಲದಿಂದಲೂ ಜಗತ್ತಿನಲ್ಲಿ ಶಿಕ್ಷಕರಿಗೆ ವಿಶೇಷವಾದ ಗೌರವದ ಸ್ಥಾನವಿದೆ. ಶಿಕ್ಷಕರು ದೇಶದ ಬಾವಿ ಪ್ರಜೆಗಳನ್ನು ನಿರ್ಮಾಣ ಮಾಡುವುದರ ಜೊತೆಗೆ ಭಾರತ ದೇಶದ ಭವಿಷ್ಯವನ್ನು ನಿರ್ಮಾಣ ಮಾಡುತ್ತಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್ ಹೇಳಿದರು.
ಪಟ್ಟಣದ ಶ್ರೀ ವೀರಭದ್ರೇಶ್ವರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಪ್ರಾರ್ಥನಾ ಆಂಗ್ಲ ಮಾದ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳ ಜೀವನವನ್ನು ರೂಪಿಸುವ ಸೃಷ್ಟಿಕರ್ತ ಶಿಕ್ಷಕರಾಗಿದ್ದಾರೆ. ಶಿಕ್ಷಕರ ಮೇಲೆ ಜವಾಬ್ದಾರಿಗಳು ಬಹಳಷ್ಟು ಇವೆ ಎಂದರು.
ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ಲಿಂಗಣ್ಣ ಮಲ್ಕನ್ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ ಚರಿತ್ರೆ ಬಗ್ಗೆ ಮಾತನಾಡಿ, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕರಾಗಿ, ಉಪನ್ಯಾಸಕರಾಗಿ ನಮ್ಮ ದೇಶದ ಉಪ ರಾಷ್ಟ್ರಪತಿಯಾಗಿ ಸೇವೆಯನ್ನು ಸಲ್ಲಿಸಿದ ಮಹಾ ಚೇತನ ಅವರ ಹುಟ್ಟು ಹಬ್ಬವನ್ನು ಶಿಕ್ಷಕರ ದಿನಾಚರಣೆವಾಗಿ ಆಚರಣೆ ಮಾಡುತ್ತಾರೆ. ಪ್ರಸತ್ತು ಶಿಕ್ಷಕರು ಮಕ್ಕಳಿಗೆ ಶಿಕ್ಷಣದೊಂದಿಗೆ ಮೌಲ್ಯವನ್ನು ಬಿಂಬಿಸುವ ಕಾಯಕ ಮಾಡಬೇಕು ಎಂದು ಹೇಳಿದ್ದರು.
ಸಂಸ್ಥೆಯ ಅಧ್ಯಕ್ಷ ಜಗದೇವ ದಿಗ್ಗಾಂವಕರ್ ಮಾತನಾಡಿದ್ದರು. ಶಿಕ್ಷರ ದಿನಾಚರಣೆ ಕುರಿತು ವಿದ್ಯಾರ್ಥಿನಿಯರಾದ ಕು.ಹೂರಂ, ಕು.ಆಪೀಯಾ, ಕು. ಪೌರ್ಣಮಿ ಚಿಕ್ಕ ಭಾಷಣಗಳ ಮೂಲಕ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದರು.
ಶಿಕ್ಷಕಿಯರಾದ ಶಮೀಮ್, ರೋಸ್ ಮೇರಿ, ನಿರ್ಮಲಾ ರಾಠೋಡ, ಅಮೀನಾ ಬೇಗಂ, ಶ್ರವಣಕುಮಾರಿ, ಪೂಜಾ ಚವ್ಹಾಣ, ಭಾರತಿ ಗುತ್ತೇದಾರ, ರಾಧಿಕಾ, ಪಲ್ಲವಿ ರೆಡ್ಡಿ, ನಸೀಮಾ ಶಿಕ್ಷಕರಾದ ಲಿಂಗರಾಜ ಅನವಾರ, ವಾಸು ಯರಗಲ್ ಇದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚಾರಣೆಯ ಪ್ರಯುಕ್ತ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿದ ಶಿಕ್ಷಕರಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಅನೇಕ ಸಾಂಸ್ಕೃತೀಕ ಕಾರ್ಯಕ್ರಮಗಳು ನಡೆದ್ದವು. ವಿದ್ಯಾರ್ಥಿನಿ ಕು.ಭಾಗ್ಯಲಕ್ಷ್ಮೀ ನಿರೂಪಿಸಿದರು.ಕು. ಆರ್.ಸುಮನ್ನಾ ಸ್ವಾಗತಿಸಿದರು, ವಿದ್ಯಾರ್ಥಿ ಸಾಯಿಕಿರಣ್ ಗುಂಡಲ್ಕರ್ ವಂದಿಸಿದರು.

