ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದಿನದ ಸಭೆ ಮೀಸಲು: ಸಚಿವ ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪೊಲೀಸ್ ಘಟಕಗಳಲ್ಲಿ ಹಮ್ಮಿಕೊಳ್ಳಲಾಗುವ ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದಿನ’ದ ಸಭೆಗಳು ಪೊಲೀಸ್ ಇಲಾಖೆಯ ಉದ್ಯೋಗಿಗಳಿಗಾಗಿ ಅಲ್ಲ, ಬದಲಿಗೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಸಮುದಾಯದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಮೀಸಲಾಗಿವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರಿಗೆ ಮುಕ್ತ ಅವಕಾಶ:
ಸ್ಥಾಯಿ ಆದೇಶ ಸಂಖ್ಯೆ 1010, ದಿನಾಂಕ 17.11.2015ರ ಅನ್ವಯ, ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತಾಲಯಗಳು, ಜಿಲ್ಲಾ ಪೊಲೀಸ್ ಕಚೇರಿಗಳು ಮತ್ತು ಪೊಲೀಸ್ ಠಾಣಾ ಮಟ್ಟದಲ್ಲಿ ಪ್ರತಿ ತಿಂಗಳ ನಾಲ್ಕನೇ ಭಾನುವಾರದಂದು ನಡೆಸಲಾಗುವ ಸಭೆಗಳು ಎಸ್‌ಸಿ/ಎಸ್‌ಟಿ ಸಮುದಾಯದ ಸಾರ್ವಜನಿಕರು ಎದುರಿಸುತ್ತಿರುವ ಕಾನೂನು ಸುವ್ಯವಸ್ಥೆ, ದೌರ್ಜನ್ಯ ಪ್ರಕರಣಗಳು, ದೂರುಗಳು ಮತ್ತು ಇತರ ಪೊಲೀಸ್ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನೇರವಾಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ತ್ವರಿತ ಪರಿಹಾರ ಕಂಡುಕೊಳ್ಳುವುದು ಈ ಸಭೆಗಳ ಮುಖ್ಯ ಉದ್ದೇಶವಾಗಿದೆ.
ತಪ್ಪು ಗ್ರಹಿಕೆ ನಿವಾರಣೆ:
ಜು.11 ರ ಪ್ರಕಟಣೆಯಲ್ಲಿ ‘ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ’ ಎಂದು ತಪ್ಪಾಗಿ ಉಲ್ಲೇಖಿಸಲಾಗಿತ್ತು. ಈ ಸಭೆಗಳು ಸಂಪೂರ್ಣವಾಗಿ ಎಸ್‌ಸಿ/ಎಸ್‌ಟಿ ಸಮುದಾಯದ ನಾಗರಿಕರ ಕಲ್ಯಾಣ ಮತ್ತು ಅವರ ನ್ಯಾಯಯುತ ಹಕ್ಕುಗಳ ರಕ್ಷಣೆಗಾಗಿ ಸಾರ್ವಜನಿಕ ಸಂಪರ್ಕ ಸಭೆಗಳಾಗಿರುತ್ತವೆ ಎಂದು ಸ್ಪಷ್ಟಪಡಿಸಿದೆ.
ರಾಜ್ಯದ ಎಲ್ಲಾ ಪೊಲೀಸ್ ಘಟಕಗಳು ಈ ಆದೇಶದ ಮೂಲ ಆಶಯದಂತೆ ಪ್ರತಿ ತಿಂಗಳ ಕೊನೆಯ ಭಾನುವಾರದಂದು ಸಾರ್ವಜನಿಕರ ಸಭೆಯನ್ನು ಕಡ್ಡಾಯವಾಗಿ ನಡೆಸಿ, ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಡಿಜಿ ಮತ್ತು ಐಜಿಪಿ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
