Oplus_0

ಪ್ರಿಯಾಂಕ್ ಖರ್ಗೆ ಉಪ ಮುಖ್ಯಮಂತ್ರಿಯಾಗಿ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಬೆಣ್ಣೂರಕರ್ ಮನವಿ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಈಗಾಗಲೇ ವಿವಿಧ ಖಾತೆಗಳ ಸಚಿವರಾಗಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿರುವ, ಕಾಂಗ್ರೆಸ್ ಹೈಕಮಾಂಡ್ ನಿಂದ ಹಾಗೂ ಸಿದ್ದರಾಮಯ್ಯ ಸರ್ಕಾರದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಮತ್ತು ಅಪಾರ ಜನಮನ್ನಣೆ ಪಡೆದ ಕಾರಣ ಇವರನ್ನು ರಾಜ್ಯದ ಡಿ.ಕೆ.ಶಿವುಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಹಾಗೂ ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಎಸ್ಸಿ/ಎಸ್ಟಿ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೆಣ್ಣೂರಕರ್ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಪ್ರಗತಿಗೆ ಹಾಗೂ ದಲಿತ ಮತ್ತು ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಅತ್ಯಂತ ಸೂಕ್ತ. ಮುಂಬರುವ ದಿನಗಳಲ್ಲಿ ಪಕ್ಷ ಹಾಗೂ ಸರ್ಕಾರವನ್ನು ಮತ್ತಷ್ಟು ಬಲಪಡಿಸಲು ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಬೆಣ್ಣೂರಕರ್ ಆಗ್ರಹಿಸಿದ್ದಾರೆ.

ಸಮಾಜ ಕಲ್ಯಾಣ, ಪ್ರವಾಸೋದ್ಯಮ, ಐಟಿಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಮರ್ಥವಾಗಿ ನಿರ್ವಹಿಸಿದ್ದಾರೆ. ಹೀಗಾಗಿ ನೂತನ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ನಾಂದಿ ಹಾಡಬೇಕು ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!