Oplus_0

ಪ್ರಿಯಾಂಕ್ ಖರ್ಗೆ ಡಿಸಿಎಂ ಸ್ಥಾನಕ್ಕಾಗಿ ವೈಷ್ಣೋದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಲಿ ಎಂದು ಕಾಂಗ್ರೆಸ್ ಮುಖಂಡ ಶರಣಕುಮಾರ್ ಚವ್ಹಾಣ ಯಾಗಾಪೂರ ಅವರು ಜಮ್ಮು-ಕಾಶ್ಮೀರದಲ್ಲಿರುವ ಮಾತಾ ವೈಷ್ಣೋದೇವಿ ದರ್ಶನ ಪಡೆದು ವಿಶೇಷ ಪೂಜೆ ಮಾಡಿಸಿದರು.

ಪ್ರಿಯಾಂಕ್ ಖರ್ಗೆ ಮೂರು ಬಾರಿ ಶಾಸಕರಾಗಿ ಹಾಗೂ ವಿವಿಧ ಖಾತೆಗಳ ಸಚಿವರಾಗಿ ಸೇವೆ ಸಲ್ಲಿಸಿ ತಮ್ಮ ಅಭಿವೃದ್ಧಿ ಕೆಲಸಗಳ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಸದಾ ಅಭಿವೃದ್ಧಿ ಪರ ಚಿಂತನೆ ಇರುವ ಇವರನ್ನು ಹೊಸ ಸರ್ಕಾರದಲ್ಲಿ ಡಿಸಿಎಂ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಇನ್ನಷ್ಟು ಹೆಚ್ಚು ಕೆಲಸ ಮಾಡಲು ಅವಕಾಶ ಮಾಡಿ ಕೊಡಬೇಕು ಎಂದು ಶರಣಕುಮಾರ್ ಚವ್ಹಾಣ ಕಾಂಗ್ರೆಸ್ ಹೈ ಕಮಾಂಡ್ ಗೆ ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!