ರಂಗ ನಿರ್ದೇಶಕ ರಾಚಣ್ಣ ಕಮರವಾಡಿ ನಿಧನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಜೀ ಕನ್ನಡದ ಖ್ಯಾತ ಹಿರಿಯ ಹಾಸ್ಯ ಕಲಾವಿದರು ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿರುವಂತ ರಾಚಣ್ಣ ಕಮರವಾಡಿ (65) ತೀವ್ರ ಅನಾರೋಗ್ಯದಿಂದ ಫೆ.21 ರಂದು ಮಧ್ಯಾಹ್ನ 2 ಗಂಟೆಗೆ ವಿಧಿವಶರಾಗಿದ್ದಾರೆ. ಅಂತ್ಯಕ್ರಿಯೆ ನಾಳೆ ಫೆ.22 ರಂದು ಮಧ್ಯಾಹ್ನ 2 ಗಂಟೆಗೆ ಅವರ ಸ್ವಂತ ಹೊಲದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅವರ ಅಗಲಿಕೆಯಿಂದ ರಂಗಭೂಮಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಕಾಶಿನಾಥ ಗುತ್ತೇದಾರ ಸಂತಾಪ ಸೂಚಿಸಿದ್ದಾರೆ.