ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕ್ಯಾಲೆಂಡರ್ ಬಿಡುಗಡೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಚಿತ್ತಾಪುರ ತಾಲೂಕಿನ ಮಹಾದೇವಮ್ಮ ಬಿ. ಪಾಟೀಲ ಕಾಲೇಜಿನ ಆವರಣದಲ್ಲಿ ಮಂಗಳವಾರ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ 2025 ರ ಕ್ಯಾಲೆಂಡರ್ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಅವರು ಮಂಗಳವಾರ ಬಿಡುಗಡೆ ಮಾಡಿದರು.
ಇದೆ ಸಂದರ್ಭದಲ್ಲಿ ಮಾತನಾಡಿದ ಅವರು, ಹೊಸ ವರ್ಷ ಜನವರಿ 2025 ರ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ. ಮಾಹಿತಿ ಹಕ್ಕು ಕಾರ್ಯಕರ್ತರು ಎಂದರೆ ಕೇವಲ ಹೆಸರಿಗಷ್ಟೇ ಅಲ್ಲದೆ ಬಡವರ ಮತ್ತು ನೊಂದವರ ಬದುಕಿಗೆ ಆಸರೆಯಾಗುವಂತಹ ಕೆಲಸ ಮಾಡಬೇಕು ಮತ್ತು ಸತ್ಯಕ್ಕೆ ಸಮೀಪವಾಗಬೇಕು ಹಾಗೂ ಸಮಾಜದಲ್ಲಿ ಭ್ರಷ್ಟಾಚಾರವನ್ನು ತಡೆಯುವಂತಹ ಕಾರ್ಯವಾಗಬೇಕು ಎಂದು ಹೇಳಿದರು.
ಪ್ರಥಮ ಬಾರಿಗೆ ಚಿತ್ತಾಪುರ ತಾಲೂಕಿನಲ್ಲಿ ಆರ್ ಟಿ ಐ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಇದೊಂದು ಜನಪರವಾದ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಭ್ರಷ್ಟಾಚಾರ ನಿಯಂತ್ರಿಸುವ ನಿಟ್ಟಿನಲ್ಲಿ ವೇದಿಕೆಯ ಪದಾಧಿಕಾರಿಗಳು ಸೇವೆ ಸಲ್ಲಿಸಿ ಎಂದು ಕಿವಿಮಾತು ಹೇಳಿದರು. ವೇದಿಕೆಯ ರಾಜ್ಯಾಧ್ಯಕ್ಷರು ಸೇರಿದಂತೆ ಎಲ್ಲ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ತಾಲೂಕು ಅಧ್ಯಕ್ಷ ಅಣ್ಣಾರಾಯ ವಿ. ಇವಣಿ, ಗೌರವಾಧ್ಯಕ್ಷ ಉದಯಕುಮಾರ ಸಾಗರ, ಉಪಾಧ್ಯಕ್ಷ ನಾಗೇಶ್ ಹಲಗಿ, ಕಾರ್ಯದರ್ಶಿ ಶಾಮಣ್ಣ ಡಿ. ಮೇಧಾ ಸೇರಿದಂತೆ ಇತರರು ಇದ್ದರು.