Oplus_0

ರಾಜ್ಯ ಮಟ್ಟದ ಕರ್ನಾಟಕ ಚೇತನ ಪ್ರಶಸ್ತಿಗೆ ಅರ್ಜಿ ಆಹ್ವಾನ: ಕೋಬಾಳ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಕರ್ನಾಟಕ ಕಲಾ, ಸಾಹಿತ್ಯ, ಸಂಸ್ಕೃತಿ ಸೇವಾ ಸಂಸ್ಥೆ ಕಲಬುರಗಿ ವತಿಯಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ-2026ರ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಮಟ್ಟದ “ಕರ್ನಾಟಕ ಚೇತನ “ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಾಬುರಾವ್ ಕೋಬಾಳ ತಿಳಿಸಿದ್ದಾರೆ

ಕಲೆ, ಸಾಹಿತ್ಯ, ಸಂಗೀತ, ಪತ್ರಿಕೋದ್ಯಮ, ವೈದ್ಯಕೀಯ ಸೇವೆ, ಉದ್ದಿಮೆದಾರರು, ನೃತ್ಯ, ಶಿಲ್ಪಕಲೆ, ಚಿತ್ರಕಲೆ, ಕ್ರೀಡೆ, ಯೋಗ, ಶಿಕ್ಷಣ, ಸರ್ಕಾರಿ ಸೇವೆ, ಕೃಷಿ, ಸಮಾಜ ಸೇವೆ, ಸಂಘ ಸಂಸ್ಥೆ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಕಲಾ ಕ್ಷೇತ್ರಗಳ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿರುವ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಸಾಧಕರು ನವೆಂಬರ್ 20 ರ ಒಳಗಾಗಿ ತಮ್ಮ ಸಾಧನೆಯ ವಿವರ, ಅರ್ಜಿ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಸಂಸ್ಥೆಯ ವಾಟ್ಸ್‌ಆ್ಯಪ್ ಸಂಖ್ಯೆಗೆ ಕಳುಹಿಸಿಕೊಡಬೇಕು. ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಸಂಸ್ಥೆಯ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9343271171/ 8660668273 ಸಂಪರ್ಕಿಸಬಹುದು.

Spread the love

Leave a Reply

Your email address will not be published. Required fields are marked *

error: Content is protected !!