ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಮೂರು ಜನ ಶಿಕ್ಷಕರು ಆಯ್ಕೆ | ಶಿಕ್ಷಕರ ದಿನಾಚರಣೆ ನಿಮಿತ್ತ ಪ್ರಶಸ್ತಿ ಪ್ರದಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಘಟಕದ ವತಿಯಿಂದ ಕೊಡಮಾಡುವ ಮಾಜಿ ಪ್ರಧಾನಿ ರಾಜೀವಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ತಾಲೂಕಿನ ಕರದಾಳ ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ನರಸಪ್ಪ ಜಾನಾ, ಯರಗಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಿವಪುತ್ರ ಹಾಗರಗಿ ಹಾಗೂ ಪಟ್ಟಣದ ಶ್ರೀ ಗಂಗಾಪರಮೇಶ್ವರಿ ಪಿಯು ಕಾಲೇಜಿನ ಪ್ರಾಚಾರ್ಯ ಮುರಳಿಧರ ಎಂ.ಪಾಟೀಲ ಅವರಿಗೆ ‘ಭಾರತ್ ಜೋಡೋ ಸಭಾಂಗಣ’ (ಇಂದಿರಾ ಗಾಂಧಿ ಭವನ) ದಲ್ಲಿ ಶನಿವಾರ ಏರ್ಪಡಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಿ ಗೌರವಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ್ ಅವರು ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಪರಿಗಣಿಸಿ ಇವರನ್ನು ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಸಂಘ ಹರ್ಷ:
ತಾಲೂಕಿನ ಮೂರು ಜನ ಶಿಕ್ಷಕರು ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಆಗಿರುವುದಕ್ಕೆ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜೇಂದ್ರ ಪ್ರಸಾದ್ ಅವರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

