ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕಲಬುರಗಿ ಹಾಗೂ ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಯಲ್ಲಿ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ನಾಗರಾಜ ಮಲ್ಲಣ್ಣ ಪ್ರಥಮ ಸ್ಥಾನ ಹಾಗೂ ಸರಕಾರಿ ಪ್ರೌಢ ಶಾಲೆ ಫರತಾಬಾದನ 9ನೇ ತರಗತಿಯ ಸ್ಫೂರ್ತಿ ಮಹೇಂದ್ರಕುಮಾರ್ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಶಿಕ್ಷಕರಾದ ಸಿದ್ದಲಿಂಗ ಬಾಳಿ ರಾವೂರ ಹಾಗೂ ಸಂತೋಷಕುಮಾರ ಹೂಗಾರ್ ಅವರ ಮಾರ್ಗದರ್ಶನದಲ್ಲಿ ಮಕ್ಕಳು ಈ ಸಾಧನೆ ಮಾಡಿರುತ್ತಾರೆ. ಮಕ್ಕಳ ಸಾಧನೆಗೆ ಜಿಲ್ಲಾ ಪಂಚಾಯತ ಸಿಇಓ ಭವರಸಿಂಗ್ ಮೀನಾ, ಡಿಡಿಪಿಐ ಸೂರ್ಯಕಾಂತ ಮದಾನೆ, ಶಿಕ್ಷಣಾಧಿಕಾರಿ ಶಂಕ್ರೆಮ್ಮ ಢವಳಗಿ ಅಭಿನಂದಿಸಿದ್ದಾರೆ.
