Oplus_0

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜು.11 ರಂದು ಸಿಎಂ, ಡಿಸಿಎಂ ಅವರಿಗೆ ನಮ್ಮಭಿಮಾನದ ಅಭಿನಂದನೆ: ಬಳೂಂಡಗಿ 

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರಿಗೆ ಜು.11 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಮ್ಮಭಿಮಾನದ ಅಭಿನಂದನೆ ಕಾರ್ಯಕ್ರಮವನ್ನು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ರವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸಮಾರಂಭದಲ್ಲಿ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಮಹಾಸ್ವಾಮಿಗಳು ಹಾಗೂ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರಿ ನೌಕರರಿಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಸಂಘದ ರಾಜ್ಯಾಧ್ಯಕ್ಷರು, ರಾಜ್ಯದ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಗಳಾದ ಹಳೆ ಪಿಂಚಣಿ ಯೋಜನೆ ಜಾರಿ ಮತ್ತು ಕೇಂದ್ರ ಸರ್ಕಾರದ ಮಾದರಿಯ ವೇತನ ಜಾರಿಗಾಗಿ ಬೃಹತ್ ಹಕ್ಕೋತ್ತಾಯವನ್ನು ಮಂಡಿಸುವರು ಎಂದು ತಿಳಿಸಿದ್ದಾರೆ.

ನಮ್ಮಭಿಮಾನದ ಸಮಾರಂಭವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸರ್ಕಾರಿ ನೌಕರರು, ಶಿಕ್ಷಕರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಅದರಂತೆ ಕಲಬುರಗಿ ಜಿಲ್ಲೆ ಮತ್ತು ಎಲ್ಲಾ ತಾಲೂಕಿನ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ನಿರ್ದೇಶಕರು ಸುಮಾರು 400 ಕ್ಕಿಂತ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಖಜಾಂಚಿ ಶ್ರೀಮಂತ ಪಟ್ಟೇದಾರ, ಜಿಲ್ಲಾ ಕಾರ್ಯದರ್ಶಿ ಚಂದ್ರಕಾಂತ ಏರಿ, ರಾಜ್ಯ ಪರಿಷತ್ ಸದಸ್ಯ ಧರ್ಮರಾಯ ಜವಳಿ, ಹಿರಿಯ ಉಪಾಧ್ಯಕ್ಷರಾದ ಎಂ.ಬಿ ಪಾಟೀಲ, ಸುರೇಶ ವಗ್ಗೆ ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!