Oplus_0

ರಾಜ್ಯದಲ್ಲಿ ಹೆಚ್‌ಎಂಪಿವಿ (HMPV) ವೈರಸ್ ಪತ್ತೆ : ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಎಂಪಿವಿ ( HMPV ) ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ ದೇಶದಲ್ಲಿ ಹೆಚ್ಎಂಪಿವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾದ ಮಾಹಿತಿ ದೊರೆತಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

Spread the love

Leave a Reply

Your email address will not be published. Required fields are marked *

error: Content is protected !!