ರಾಷ್ಟ್ರೀಯ ರತ್ನ ಗೌರವ ಪ್ರಶಸ್ತಿಗೆ ಅಮರೇಶ್ವರಿ ಚಿಂಚನಸೂರ ಆಯ್ಕೆ, ಫೆ.15 ರಂದು ಗೋವಾದಲ್ಲಿ ಪ್ರಶಸ್ತಿ ಪ್ರದಾನ
ನಾಗಾವಿ ಎಕ್ಸಪ್ರೆಸ್
ಕಲಬುರ್ಗಿ: ಶಿಕ್ಷಣ ಮತ್ತು ಕೈಗಾರಿಕೋದ್ಯಮಿ ವಿಭಾಗದಲ್ಲಿ ಕಲಬುರ್ಗಿ ಜಿಲ್ಲೆಯ ಅಮರೇಶ್ವರಿ ಚಿಂಚನಸೂರ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಯುಎಸ್ಎ ಇಂಟರ್ನ್ಯಾಷನಲ್ ಹ್ಯೂಮನ್ ಡೆವಲಪ್ಮೆಂಟ್ ಕೌನ್ಸಿಲ್ ಅವರು ರಾಷ್ಟ್ರೀಯ ರತ್ನ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೌನ್ಸಿಲ್ ಮುಖ್ಯಸ್ಥರು ತಿಳಿಸಿದ್ದಾರೆ.
ಫೆ.15 ರಂದು ಗೋವಾದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ರಾಷ್ಟ್ರೀಯ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕಲಬುರ್ಗಿ ಜಿಲ್ಲೆಯ ಖ್ಯಾತ ಉದ್ಯಮಿದಾರರು ಹಾಗೂ ಚಿತ್ತಾಪುರ ಪಟ್ಟಣದ ಶ್ರೀ ಗಂಗಾಪರಮೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಅಮರೇಶ್ವರಿ ಬಾಬುರಾವ್ ಚಿಂಚನಸೂರ ಅವರಿಗೆ ರಾಷ್ಟ್ರೀಯ ರತ್ನ ಪ್ರಶಸ್ತಿ ಲಭಿಸಿರುವುದಕ್ಕೆ ಗಂಗಾಪರಮೇಶ್ವರಿ ಶಿಕ್ಷಣ ಸಂಸ್ಥೆಯ ಪಿ.ಯು, ಡಿಗ್ರಿ, ಡಿ.ಇಡಿ, ಬಿ.ಇಡಿ ಹಾಗೂ ಸಿಬಿಎಸ್ಇ ಶಾಲಾಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳು ಸಲ್ಲಿಸಿದ್ದಾರೆ.