ರಟಕಲ್ ಕುಡಿವ ನೀರಿಗಾಗಿ ಕಾಳಗಿ ತಹಸೀಲ್ ಕಚೇರಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ, ತಕ್ಷಣ ನೀರು ಪೂರೈಕೆಗೆ ವೀರಣ್ಣ ಗಂಗಾಣಿ ಆಗ್ರಹ
ನಾಗಾವಿ ಎಕ್ಸ್‌ಪ್ರೆಸ್
ಕಾಳಗಿ: ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದ್ದು,, ತಕ್ಷಣ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ತಾಲೂಕು ಅಧ್ಯಕ್ಷ ವೀರಣ್ಣ ಗಂಗಾಣಿ ನೇತೃತ್ವದಲ್ಲಿ ಗ್ರಾಮಸ್ಥರು ಕಾಳಗಿ ತಹಸೀಲ್ ಕಚೇರಿ ಎದುರು ಖಾಲಿ ಕೊಡ ಹಿಡಿದು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಕಾಳಗಿ ತಾಲೂಕು ಅಧ್ಯಕ್ಷ ವೀರಣ್ಣ ಗಂಗಾಣಿ ಮಾತನಾಡಿ, ತಾಲೂಕಿನ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸರ್ಕಾರ ನೀರಿನ ಸಮಸ್ಯೆ ಆಗಬಾರದೆಂದು ನೂರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅಧಿಕಾರಿಗಳು ನೀರಿನ ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಟಕಲ್ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವೂದೇ ಪ್ರಯೋಜನವಾಗಿಲ್ಲ. ಒಂದೆರಡು ದಿನಗಳಲ್ಲಿ ನೀರಿನ ಸಮಸ್ಯೆ ಪರಿಹರಿಸಿ ಗ್ರಾಮಕ್ಕೆ ನೀರು ಸರಬರಾಜು ಮಾಡದಿದ್ದರೆ ತಹಸೀಲ್ ಕಚೇರಿಗೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದರು.
ರಟಕಲ್ ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಜಲಜೀವನ ಮಷಿನ್ ಯೋಜನೆ (ಜೆಜೆಎಂ) ಕಮಾಗಾರಿ ಕಳಪೆಯಾಗಿದ್ದು, ಕೂಡಲೇ ಕಾಮಗಾರಿಯನ್ನು ಪರಿಶೀಲನೆ ನಡೆಸಿ ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜು ಸ್ವಾಮಿ ಕಿಣ್ಣಿ, ಅನೀಲಕುಮಾರ ಹುಳಗೇರಿ, ಸುಭಾಷ ಹುಳಗೇರಿ, ಹಣಮಂತ ವಾಡೇದ, ವಿರೇಶ ಕಂದಗೋಳ, ಬಿಬನಬಿ ಖುರೇಷಿ, ಸಜಾದಾಬಿ ಮಡಕಿ, ಸೆಮಿನಾ ಕೊರಬಾ, ಮಸ್ತಾನಬಿ ಕಟ್ಟೋಳಿ, ನಿಲಮ್ಮ ಮಹಾಗಾಂವ್ ಸೇರಿದಂತೆ ಇತರರು ಇದ್ದರು.