Oplus_131072

ರಾವೂರ ಗ್ರಾಮದಲ್ಲಿ ಬಸವೇಶ್ವರ ಮೂರ್ತಿ ಅನಾವರಣ ಮೇ 27 ಕ್ಕೆ

ನಾಗಾವಿ ಎಕ್ಸಪ್ರೆಸ್

ಶಹಾಬಾದ: ತಾಲೂಕಿನ ರಾವೂರ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಮೇ. 27 ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ 892ನೇ ಜಯಂತ್ಯೋತ್ಸವ ಹಾಗೂ ಮೂರ್ತಿ ಅನಾವರಣ ಸಮಾರಂಭ ನಡೆಯಲಿದೆ ಎಂದು ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಿತಿ ತಿಳಿಸಿದೆ.

ಅಂದು ಸಾಯಂಕಾಲ 4 ಗಂಟೆಗೆ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಿಂದ ವಿವಿಧ ಕಲಾ ತಂಡಗಳೊಂದಿಗೆ ಬಸವೇಶ್ವರ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದೆ. ಸಂಜೆ 6.30 ಕ್ಕೆ ರಾವೂರ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಸವೇಶ್ವರ ಮೂರ್ತಿ ಅನಾವರಣಗೊಳ್ಳಲಿದೆ. ಸೊನ್ನದ ಪೂಜ್ಯ ಶಿವಾನಂದ ಸ್ವಾಮಿಗಳು, ಮುಗುಳನಾಗಾವಿಯ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಚಿತ್ತಾಪುರದ ಸೋಮಶೇಖರ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ.

ನಂತರ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾoಕ್ ಖರ್ಗೆ ಉದ್ಘಾಟನೆ ಮಾಡಲಿದ್ದಾರೆ. ಸಚಿವ ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಷಟಸ್ಥಳ ದ್ವಜಾರೋಹಣ ಮಾಡಲಿದ್ದು, ಶಾಸಕ ಎಂ.ವೈ. ಪಾಟೀಲ್ ಬಸವ ಪುಷ್ಪರ್ಚನೆ ಮಾಡುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಬಸವರಾಜ ಮತ್ತಿಮುಡ್, ಶಶಿಲ್ ನಮೋಶಿ, ಬಿ.ಜಿ. ಪಾಟೀಲ್, ಜಿಲ್ಲಾ ವೀರಶೈವ ಸಮಾಜ ಅಧ್ಯಕ್ಷ ಶರಣು ಮೋದಿ, ತಾಲೂಕ ಅಧ್ಯಕ್ಷ ನಾಗರಾಜ ಭಂಕಲಗಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಮುಖರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!