ರಾವೂರ ಗ್ರಾಮದಲ್ಲಿ ವಿಶ್ವ ಮೆದುಳು ದಿನಾಚರಣೆ | ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಬಹಳ ಮುಖ್ಯ: ಶಾಂತಾ ಜಕಾತಿ
ನಾಗಾವಿ ಎಕ್ಸಪ್ರೆಸ್
ಶಹಾಬಾದ: ದೇಹದ ಉತ್ತಮ ಆರೋಗ್ಯಕ್ಕೆ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಬಹಳ ಮುಖ್ಯವೆಂದು ಜೀಮ್ಸ್ ಆಸ್ಪತ್ರೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕಿ ಶಾಂತಾ ಜಕಾತಿ ಹೇಳಿದರು.
ತಾಲೂಕಿನ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಜೀಮ್ಸ್ ಆಸ್ಪತ್ರೆ ವತಿಯಿಂದ ನಡೆದ ವಿಶ್ವ ಮೆದುಳು ದಿನವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಶಾಲಾ ಕಾಲೇಜು ಮತ್ತು ಸಾರ್ವಜನಿಕರಲ್ಲಿ ಮೆದುಳಿನ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ನಡೆಯುತ್ತಿದೆ. ಮರೆವು, ಮೂರ್ಛೆ, ಪಾರ್ಶ್ಶ್ವವಾಯು ನಂತಹ ರೋಗಗಳು ಇಂದು ಸಾಮಾನ್ಯವಾಗಿವೆ. ಯುವಕರಲ್ಲಿ ಇತ್ತೀಚಿಗೆ ಇಂತಹ ಸಮಸ್ಯೆಗಳು ಬರುತ್ತಿದೆ. ಇಂತಹ ಸಮಸ್ಯೆಗಳನ್ನು ತಡೆಗಟ್ಟಲು ಉತ್ತಮ ಪೌಷ್ಟಿಕ ಆಹಾರ, ನಿಯಮಿತ ಆರೋಗ್ಯ, ಯೋಗ, ಧ್ಯಾನ, ಅವಶ್ಯಕತೆ ಇದೆ. ಆದ್ದರಿಂದ ಎಲ್ಲರೂ ತಮ್ಮ ತಮ್ಮ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಂಡು ಮುಂದಾಗುವ ಅಪಾಯಗಳನ್ನು ತಡೆಗಟ್ಟಿ ಎಂದು ಹೇಳಿದರು.
ಕಾರ್ಯಕ್ರಮದ ಸಾನಿದ್ಯವನ್ನು ವಹಿಸಿ ಮಾತನಾಡಿದ ಪೂಜ್ಯ ಸಿದ್ದಲಿಂಗ ಸ್ವಾಮೀಜಿ, ಆರೋಗ್ಯವೇ ಭಾಗ್ಯ. ಎಷ್ಟು ಸಂಪತ್ತು ಇದ್ದರೂ ಅದನ್ನು ಅನುಭವಿಸಲು ಉತ್ತಮ ಆರೋಗ್ಯ ಇರದಿದ್ದರೆ ಎಲ್ಲವೂ ವ್ಯರ್ಥ ಎಂದು ಹೇಳಿದರು.
ಶಿಕ್ಷಕ ಸಿದ್ದಲಿಂಗ ಬಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳಿಗೆ ವಿಷಯವನ್ನು ಚಟುವಟಿಕೆಗಳ ಮೂಲಕ ಮಾಡಿಸಿ ಉತ್ತಮ ಸಾಮಾರ್ಥ್ಯ ತೋರಿದ ಭಾಗ್ಯಶ್ರೀ, ಅಂಜಲಿ ಹಾಗೂ ಶರಣ ಅವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಪ್ರೌಢ ವಿಭಾಗದ ಮುಖ್ಯಗುರುಗಳು ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

