ರೇಣುಕಾಚಾರ್ಯರ ಜಯಂತಿಗೆ ಅಧಿಕಾರಿಗಳು ಗೈರು ವೀರಶೈವ ಲಿಂಗಾಯತ ಸಮಾಜ ಆಕ್ರೋಶ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಗೈರುಹಾಜರಿ ಆಗುವ ಮೂಲಕ ಅವಮಾನ ಮಾಡಿದ್ದಾರೆ ಎಂದು ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ತಹಶೀಲ್ದಾರ್ ನಾಗಯ್ಯ ಹಿರೇಮಠ, ಗೈರುಹಾಜರಿ ಆದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು, ಸಮಾಜದ ಗೌರವಾಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಹಿರಿಯ ಮುಖಂಡರಾದ ಶಿವಲಿಂಗಪ್ಪ ವಾಡೇದ್, ಸೋಮಶೇಖರ ಪಾಟೀಲ ಬೆಳಗುಂಪಾ, ರವೀಂದ್ರ ಸಜ್ಜನಶೆಟ್ಟಿ, ನಾಗರಾಜ ರೇಷ್ಮೆ, ನಾಗರೆಡ್ಡಿ ಗೋಪಸೇನ್, ಮಲ್ಲಣ್ಣ ಮಾಸ್ಟರ್ ಮುಡಬೂಳ, ರೇವಣಸಿದ್ದಪ್ಪ ರೋಣದ್, ಅನೀಲ್ ವಡ್ಡಡಗಿ, ಮಹೇಶ್ ಬೆಟಗೇರಿ, ಬಸವಂತರಾವ ಮಾಲಿ ಪಾಟೀಲ, ಪ್ರಸಾದ್ ಅವಂಟಿ, ರಮೇಶ್ ಕಾಳನೂರ ಸೇರಿದಂತೆ ಇತರರು ಇದ್ದರು.