ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ಅವರಿಗೆ ಸಿದ್ದು ಪೂಜಾರಿ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರನ್ನು ವಾಡಿ ಪಟ್ಟಣದಲ್ಲಿ ಕುರುಬ ಸಮಾಜದ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಯುವ ಮುಖಂಡ ಸಿದ್ದು ಪೂಜಾರಿ ಅವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೀಮೂದ್ ಸಾಹೇಬ್, ಪುರಸಭೆ ಮಾಜಿ ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಮಾಜಿ ಸದಸ್ಯ ಸೂರ್ಯಕಾಂತ ರದ್ದೆವಾಡಿ, ಆರ್ಯ ಈಡಿಗ ಸಮಾಜದ ಅಧ್ಯಕ್ಷ ಸುನೀಲ್ ಗುತ್ತೇದಾರ, ಕೋಲಿ ಸಮಾಜದ ಮುಖಂಡ ನಾಗೇಂದ್ರ ಜೈಗಂಗಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.