ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಹಾಂತಪ್ಪ ಸಂಗಾವಿ ಆಗ್ರಹ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚೆಗೆ ಸಚಿವರು (ಆರ್.ಎಸ್.ಎಸ್) ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಿಗೆ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳ ಮೈದಾನಗಳಲ್ಲಿ ಮತ್ತು ಸರ್ಕಾರಿ ಸ್ಥಳಗಳಲ್ಲಿ ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಕೆಲವು ಕಿಡಿಗೇಡಿಗಳು ದೂರವಾಣಿ ಮೂಲಕ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಲ್ಲದೇ ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

