ಚಿತ್ತಾಪುರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟು ಹಬ್ಬದ ನಿಮಿತ್ತ ಅನ್ನದಾಸೋಹ, ಹೆಣ್ಣು ಮಕ್ಕಳಿಗೆ ಸೀರೆ ವಿತರಣೆ, ದಲಿತ ಮುಖಂಡರಿಗೆ ಹಾಗೂ ಪತ್ರಕರ್ತರಿಗೆ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ನಿಮಿತ್ತ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ವಿಭಿನ್ನ ರೀತಿಯ ಜನೋಪಯೋಗಿ ಅಪರೂಪದ ಕಾರ್ಯಕ್ರಮಗಳು ಮಾಡುತ್ತಿರುವುದು ಶ್ಲಾಘನೀಯ ಎಂದು ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.
ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 46ನೇ ಹುಟ್ಟು ಹಬ್ಬದ ಅಂಗವಾಗಿ ಬುದ್ಧ ವಿಹಾರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅನ್ನದಾಸೋಹ, ಬಡ ಹೆಣ್ಣು ಮಕ್ಕಳಿಗೆ ಸೀರೆ ವಿತರಣೆ, ದಲಿತ ಸಂಘಟನೆಗಳ ಹಿರಿಯ ಮುಖಂಡರಿಗೆ ಗೌರವ ಸನ್ಮಾನ ಮತ್ತು ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡು ಜನ ಹಿತವನ್ನು ಮರೆಯುವ ಈಗಿನ ಕಾಲದಲ್ಲಿ ಪ್ರಿಯಾಂಕ್ ಖರ್ಗೆ ಸಿಕ್ಕ ಅಧಿಕಾರವನ್ನು ಜನೋಪಯೋಗಿಗೆ ಬಳಸಿ ಸಂವಿಧಾನದ ಹಾಗೂ ಪ್ರಜಾಪ್ರಭುತ್ವದ ಆಶಯಗಳಡಿ ಅಧಿಕಾರ ನಡೆಸುವ ಒಬ್ಬ ಧೀಮಂತ ನಾಯಕರಾಗಿದ್ದಾರೆ ಎಂದರು.
ಡಾಂಬಿಕ ಹುಟ್ಟು ಹಬ್ಬ ವನ್ನು ಬಿಟ್ಟು ಸರಳ ರೀತಿಯ ಬಡ ಜನರಿಗೆ, ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಾಜ ಮುಖಿ ಕಾರ್ಯಕ್ರಮಗಳು ಹಮ್ಮಿಕೊಳ್ಳಿ ಎಂದು ಸಚಿವರು ಹೇಳಿದಂತೆ ಎಲ್ಲೆಡೆ ವಿಭಿನ್ನ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈ ಬಾರಿಯ ಪ್ರಿಯಾಂಕ್ ಖರ್ಗೆ ಅವರ 46ನೇ ಜನ್ಮದಿನದಕ್ಕೆ ಹೊಸ ಮೆರುಗು ನೀಡಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು ಮಾತನಾಡಿ, ಬಾಬಾಸಾಹೇಬ ಅಂಬೇಡ್ಕರ್ ಅವರ ಹಾದಿಯಲ್ಲಿ ಸಾಗಿದ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೇವೆ ಅಮೋಘವಾಗಿದೆ ಎಂದರು. ಚಿತ್ತಾಪುರ ಕ್ಷೇತ್ರದಲ್ಲಿ ಪ್ರತಿಯೊಂದು ಕಟ್ಟಡಕ್ಕೆ ಕಿವಿಗೊಟ್ಟು ಕೇಳಿದರೆ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬರುತ್ತದೆ ಈ ನಿಟ್ಟಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಿವೆ ಎಂದು ಹೇಳಿದರು.
ಡಿಎಸ್ಎಸ್ ಜಿಲ್ಲಾ ಸಂಚಾಲಕ, ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೆಣ್ಣೂರಕರ್ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ ಮಾಜಿ ಸದಸ್ಯರಾದ ಶಂಭುಲಿಂಗ ಗುಂಡಗುರ್ತಿ, ಶಿವರುದ್ರಪ್ಪ ಭೀಣಿ, ಸಿಪಿಐ ಚಂದ್ರಶೇಖರ ತಿಗಡಿ, ಪುರಸಭೆ ಮಾಜಿ ಅಧ್ಯಕ್ಷರಾದ ಹಾಲಿ ಸದಸ್ಯರಾದ ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಪಿಎಸ್ಐ ಶ್ರೀಶೈಲ್ ಅಂಬಾಟಿ, ಕಾಂಗ್ರೆಸ್ ಯುವ ಅಧ್ಯಕ್ಷ ಸಂಜಯ ಬುಳಕರ್, ಕಾಂಗ್ರೆಸ್ ಮುಖಂಡ ನಾಗಪ್ಪ ಕಲ್ಲಕ್, ದಲಿತ ಮುಖಂಡ ಶ್ರೀಕಾಂತ ಶಿಂದೆ, ಲೋಹಿತ್ ಮುದಡಗಿ, ರಾಜು ಬುಳಕರ್, ಶಿವಯ್ಯ ಗುತ್ತೇದಾರ, ಸಂತೋಷ ಪೂಜಾರಿ, ಹಣಮಂತ ಬೆಂಕಿ, ಕುಂದನ್ ಸಿಂಗ್, ನಾಗೇಂದ್ರ ಬುರ್ಲಿ, ವಿಶ್ವನಾಥ ಬೀದಿಮನಿ ಸೇರಿದಂತೆ ಅನೇಕರು ಇದ್ದರು.
ದಲಿತ ಸಂಘಟನೆಗಳ ಹಿರಿಯ ಮುಖಂಡರಾದ ಮರಿಯಪ್ಪ ಹಳ್ಳಿ, ಸುರೇಶ ಮೆಂಗನ್, ದೇವಿಂದ್ರ ಕುಮಸಿ, ರಾಜಪ್ಪ ಹುಂಡೇಕಾರ ಸೇರಿದಂತೆ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಗರಾಜ್ ಓಂಕಾರ ನಿರೂಪಿಸಿದರು.