Oplus_0

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಪೌರಕಾರ್ಮಿಕರಿಗೆ ಸ್ವೆಟರ್ ವಿತರಣೆ, ಪ್ರಿಯಾಂಕ್ ಖರ್ಗೆ ಇಚ್ಛಾಶಕ್ತಿಯಿಂದ ಉತ್ತಮ ಕ್ರೀಡಾಂಗಣ ನಿರ್ಮಾಣ: ಕರದಾಳ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಇಚ್ಛಾಶಕ್ತಿಯಿಂದ ಪಟ್ಟಣದಲ್ಲಿ ಉತ್ತಮ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.

ಪಟ್ಟಣದ ಒಳಾಂಗಣ ಕ್ರೀಡಾಂಗಣದಲ್ಲಿ ತಾಲೂಕು ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ  ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 46ನೇ ಹುಟ್ಟು ಹಬ್ಬದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರಿಗೆ ಸ್ಟೆಟರ್ ವಿತರಣೆ, ವಿವಿಧ ಕ್ರೀಡೆಗಳಲ್ಲಿ ವಿಭಾಗ ಮಟ್ಟದಲ್ಲಿ ಮತ್ತು ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಹಾಗೂ ಪತ್ರಕರ್ತರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರು ಕ್ರೀಡಾಂಗಣದ ನಿರ್ಮಾಣ ಮಾಡಿದ್ದರಿಂದ ಕ್ರೀಡಾ ವಾತಾವರಣ ನಿರ್ಮಾಣವಾಗಿದೆ ಹಾಗೂ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಾಗಿದೆ ಎಂದರು.

ಕ್ರೀಡಾಂಗಣದ ನಿರ್ವಹಣೆ ಮಾಡಿ ಆಗಾಗ ಪಂದ್ಯಾವಳು ಆಯೋಜಿಸಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿರುವ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅವರ ಕಾರ್ಯ ಮೆಚ್ಚುವಂಥದ್ದು ಎಂದು ಹೇಳಿದರು.

ಪತ್ರಕರ್ತ ಕಾಶಿನಾಥ ಗುತ್ತೇದಾರ ಮಾತನಾಡಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ ಈ ಬಾರಿ ಜಿಲ್ಲಾದ್ಯಂತ ಹತ್ತು ಹಲವಾರು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆದಿರುವುದು ದಾಖಲೆಯಾಗಿದೆ ಎಂದರು. ಪ್ರಿಯಾಂಕ್ ಖರ್ಗೆ ರಾಜಕಾರಣಕ್ಕೆ ಮಾದರಿ ಹಾಗೂ ಆದರ್ಶರಾಗಿದ್ದಾರೆ, ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ ಎಂದು ಹೇಳಿದರು. ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ನಿರಂತರ ಕ್ರೀಡಾ ಚಟುವಟಿಕೆಗಳು ನಡೆಯುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಚಂದ್ರಶೇಖರ ಕಾಶಿ, ಉದ್ಯಮಿ ವಿಜಯಕುಮಾರ್ ದೇಶಮುಖ್, ಕಾಂಗ್ರೆಸ್ ಯುವ ಅಧ್ಯಕ್ಷ ಸಂಜಯ ಬುಳಕರ್, ಕಾಂಗ್ರೆಸ್ ಮುಖಂಡ ದೇವಿಂದ್ರ ಅರಣಕಲ್ ಮುಖ್ಯ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ನಾಗಾವಿ ಜಾತ್ರೆಯ ಸಮಯದಲ್ಲಿ ದೀಪಾಲಂಕಾರ ಸೇವೆ ಸಲ್ಲಿಸಿದ ಆನಂದ ರಾವೂರಕರ್ ಅವರನ್ನು ಸನ್ಮಾನಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ಸಾಬಣ್ಣ ವೈ.ಕಾಶಿ ಅಧ್ಯಕ್ಷತೆ ವಹಿಸಿದ್ದರು.

ಪದಾಧಿಕಾರಿಗಳಾದ ಸಂತೋಷ ಕಲಾಲ್, ರಾಜಶೇಖರ್ ಬಳ್ಳಾ, ಶ್ರೀನಿವಾಸ ಪೆಂದು, ಸುರೇಶ ಯರಗಲ್, ಅಲಾವೋದ್ದಿನ್ ಭಂಕಲಗಿ, ಚಂದ್ರಶೇಖರ್ ಊಟಗೂರ, ಖದೀರ್, ರೋಹಿತ್. ವಿಜಯ, ಶಿವು, ಆದೀನಾಥ ಕಾಶಿ, ರೀಯಾಜ, ರಾಜು ರಾಠೋಡ, ಆಕಾಶ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸಾಬಣ್ಣ ಕಾಶಿ ಸೇರಿದಂತೆ ಇತರರು ಇದ್ದರು. ಬಾಬು ಕಾಶಿ ನಿರೂಪಿಸಿದರು.

Spread the love

Leave a Reply

Your email address will not be published. Required fields are marked *

You missed

error: Content is protected !!