Oplus_0

ಚಿತ್ತಾಪುರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಜನ್ಮದಿನ ಪ್ರಯುಕ್ತ ರಕ್ತದಾನ ಶಿಬಿರ, ರಕ್ತದಾನ ಮಾಡಿ ಜೀವ ಉಳಿಸಲು ಬುಳಕರ್ ಕರೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ ಇದೇ ನ.22 ರಂದು 46 ನೇಯ ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬುಳಕರ್ ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪ್ರಿಯಾಂಕ್ ಖರ್ಗೆಯವರ ಅಭಿಮಾನಿಗಳು ಸ್ವ-ಇಚ್ಛೆಯಿಂದ ರಕ್ತದಾನ ಮಾಡಲು ಇಚ್ಛಿಸುವವರು ಚಿತ್ತಾಪುರ ಪಟ್ಟಣದ ಬಸ್ ನಿಲ್ದಾಣ ಎದುರುಗಡೆ ನವೆಂಬರ್ 22 ರಂದು ಬೆಳಗ್ಗೆ 10 ಘಂಟಗೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ

ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆ ಇರುವ ಜನರಿಗೆ ನೇರವಾಗುವ ಮೂಲಕ ಇತರರ ಜೀವ ಉಳಿಸುವ ಕೆಲಸಕ್ಕೆ ಮುಂದಾಗಬೇಕೆಂದು ಬುಳಕರ್ ಕೋರಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!