ಕರ್ನಾಟಕ ಹೈಕೋರ್ಟ್ ಮುಂದೆ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕಾಗಿ ಕ್ರಮವಹಿಸಲು ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರದ‌ ಮುಖ್ಯ ಕಾರ್ಯದರ್ಶಿಗೆ ಪತ್ರ

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಪಡಿಸಲು ಅಗತ್ಯ ಕ್ರಮವಹಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ. ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳು ಹಲವಾರು ವರ್ಷಗಳಿಂದ ಬಾಕಿ ಉಳಿದಿರುತ್ತವೆ. ಇದರಿಂದಾಗಿ ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿರುತ್ತಾರೆ.

ಆದ್ದರಿಂದ ಅಭ್ಯರ್ಥಿಗಳ ಹಾಗೂ ಅಧಿಕಾರಿ ನೌಕರರ ಭವಿಷ್ಯದ ಹಿತದೃಷ್ಟಿಯಿಂದ ಕರ್ನಾಟಕ ಉಚ್ಚ ನ್ಯಾಯಲಯ ಹಾಗೂ ವಿವಿಧ ವಿಭಾಗೀಯ ಪೀಠಗಳಲ್ಲಿ ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳಲ್ಲಿ ಸ್ಪಷ್ಟವಾದ ಅಗತ್ಯ ಮಾಹಿತಿಯನ್ನು ಕಾಲಮಿತಿಯೊಳಗೆ ಸಲ್ಲಿಸಲು ಹಾಗೂ ಸರ್ಕಾರಿ ವಕೀಲರೊಂದಿಗೆ ಸಮನ್ವಯ ಸಾಧಿಸಿ ಎಲ್ಲಾ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲುವಂತೆ ಸಂಬಂಧಪಟ್ಟ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!