ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ವಿಡಿಯೋ ಕಾನ್ಫಿರೆನ್ಸ್ ಮೂಲಕ ಸಭೆ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಾಗೂ ಪ್ರತಿನಿಧಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಸಭೆ ನಡೆಸಿದರು.
ನವೆಂಬರ್ 7 ರಂದು ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಬ್ಬಿನ ದರ ನಿಗದಿಪಡಿಸಿ ಅದರಂತೆ ಒದಗಿಸಲು ಸಚಿವರು ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕರು ಸರ್ಕಾರ ನಿಗದಿಪಡಿಸಿದ ದರದಲ್ಲಿ ಕಬ್ಬು ಖರೀದಿಗೆ ಸಂಬಂಧಿಸಿದಂತೆ ಆಗುವ ಕಷ್ಟಗಳನ್ನು ಸಚಿವರಿಗೆ ತಿಳಿಸಿದರು.
ಆಗ ಉತ್ತರಿಸಿದ ಸಚಿವರು, ಸರ್ಕಾರವು ಈಗಾಗಲೇ ತಮ್ಮ ಎಲ್ಲಾ ಅಹವಾಲುಗಳನ್ನು ಆಲಿಸಿದ್ದು ಕಳೆದ ಬಾರಿಗಿಂತ ಈ ಸಲ ಒಳ್ಳೆಯ ಬೆಳೆ ಬೆಳೆದಿದ್ದು ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಯವರು ರೈತರಿಗೆ ಹೆಚ್ಚಿನ ದರ ನಿಗದಿಪಡಿಸಿ ಅದರಂತೆ ಘೋಷಿಸಿ, ಕಬ್ಬು ಕಟಾವು ಹಾಗೂ ನುರಿಸುವ ಕಾರ್ಯವನ್ನು ಪ್ರಾರಂಭಿಸುವಂತೆ ಸೂಚಿಸಿದರು.

