Oplus_0

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ, ಕ್ರಿಕೆಟ್ ಪಂದ್ಯಾವಳಿ ಆಯೋಜನೆ: ಮುಕ್ತಾರ್ ಪಟೇಲ್ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರದ ಶಾಸಕರು ಗೃಹ, ಐಟಿಬಿಟಿ ಹಾಗೂ ಇ-ಅಡಳಿತ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 48 ನೇ ಜನ್ಮದಿನದ ಪ್ರಯುಕ್ತ ಪಿ.ಕೆ ಎಂಟರ್ಪ್ರೈಸಸ್ ವತಿಯಿಂದ ಪಟ್ಟಣದ ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದ್ದು ಭಾನುವಾರ ಸಾಯಂಕಾಲ 4 ಗಂಟೆಗೆ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಜೊತೆಗೆ ಕೆಕ್ ಕತ್ತರಿಸುವ ವಿಶೇಷವಾಗಿ ಜನ್ಮದಿನವನ್ನು ಆಚರಿಸಲಾಗುವುದು ಎಂದು ಟೂರ್ನಮೆಂಟ್ ಸಂಘಟಕ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಮುಕ್ತಾರ್ ಅಹ್ಮದ್ ಪಟೇಲ್ ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಜನ್ಮದಿನವನ್ನು ಹಲವು ವರ್ಷಗಳಿಂದ ಆಚರಿಸಿಕೊಳ್ಳುತ್ತಿಲ್ಲ, ನನ್ನ ಜನ್ಮದಿನಕ್ಕೆ ಖರ್ಚು ಮಾಡುವ ಹಣವನ್ನು ಸಮಾಜಮುಖಿ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಎಂದು ಕರೆ ನೀಡಿದ ಪ್ರಯುಕ್ತ, ಪಿ.ಕೆ ಎಂಟರ್ಪ್ರೈಸಸ್ ವತಿಯಿಂದ ಪ್ರತಿ ವರ್ಷ ಅನ್ನ ಸಂತರ್ಪಣೆ, ಹಣ್ಣುಹಂಪಲು ವಿತರಣೆ ಮಾಡಲಾಗುತ್ತಿತ್ತು, ಆದರೆ ಈ ಬಾರಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ಕ್ರೀಡಾ ಆಸಕ್ತರು, ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!