ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಸಚಿವ ಸಂಪುಟ ಉಪಸಮಿತಿ ರಚನೆ: ಅಧ್ಯಕ್ಷರಾಗಿ ಸಚಿವ ಪ್ರಿಯಾಂಕ್ ಖರ್ಗೆ ನೇಮಕ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಸಚಿವ ಸಂಪುಟ ಉಪಸಮಿತಿಯನ್ನು ಈ ಕೆಳಕಂಡಂತೆ ರಚಿಸಲಾಗಿದೆ ಎಂದು ಸಚಿವ ಸಂಪುಟದ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ (ಅಧ್ಯಕ್ಷರು), ಸಮಾಜ ಕಲ್ಯಾಣ ಸಚಿವರ ಕೆ.ಹೆಚ್. ಮುನಿಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಸ್ ಸಚಿವ ಯು.ಟಿ. ಖಾದರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ, ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣಗೌಡ, ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ (ಸದಸ್ಯರು).
ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ನಿಯಮ 13(5) ಹಾಗೂ ಸುತ್ತೋಲೆ ಸಂಖ್ಯೆ: ಸಿಎಸ್ 02 ಎಸ್ಸಿಎಂ 2025, ದಿನಾಂಕ: 15.03.2025ರ ಪ್ರಕಾರ ಒಳಾಡಳಿತ ಇಲಾಖೆಯು ಈ ಸಚಿವ ಸಂಪುಟ ಉಪಸಮಿತಿಗೆ ಅಗತ್ಯ ನೆರವು ನೀಡುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

