ಸಾಹಿತ್ಯ ರತ್ನ ಪ್ರಶಸ್ತಿಗೆ ಭೀಮಯ್ಯ ಮುಂಡರಗಿ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ತಾಲೂಕಿನ ಮುಂಡರಗಿ ಗ್ರಾಮದ ಕವಿಗಳು ಭೀಮಯ್ಯ ಎಸ್. ಕೆ. ಅವರು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಹಾಗೂ ಸಾಧನೆ ಗುರುತಿಸಿ ಸಾಹಿತ್ಯ ರತ್ನ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ ಎಂದು ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಮುಖ್ಯಸ್ಥರು ತಿಳಿಸಿದ್ದಾರೆ.
ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಸಹಯೋಗಿ ಸಂಸ್ಥೆಗಳ ಆಶ್ರಯದಲ್ಲಿ ಈ ಪ್ರಶಸ್ತಿ ನೀಡಲಾಗಿದೆ. ಆ.23 ರಂದು ಕಲಬುರಗಿಯ ಕನ್ನಡ ಭವನದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭೀಮಯ್ಯ ಎಸ್ ಕೆ ಮುಂಡರಗಿ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

