ಪೋಲಕಪಲ್ಲಿಯ ನವೀಕೃತ ಸಾಲು ಮರದ ತಿಮ್ಮಕ್ಕ ವೃಕ್ಷ್ಯೋದ್ಯಾನ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಚಿಂಚೋಳಿ: ತಾಲೂಕಿನ ಪೋಲಕಪಲ್ಲಿಯಲ್ಲಿ ಅರುಣ್ಯ ಇಲಾಖೆ ವತಿಯಿಂದ ಸುಮಾರು 1.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನವೀಕೃತ ಸಾಲು ಮರದ ತಿಮ್ಮಕ್ಕ ವೃಕ್ಷವನವನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.
ನಂತರ ಅಧಿಕಾರಿಗಳೊಂದಿಗೆ ವನದಲ್ಲಿ ಒಂದು ಸುತ್ತು ಹಾಕಿ ವಿವಿಧ ಸಸ್ಯ ರಾಶಿಗಳನ್ನು ವೀಕ್ಷಿಸಿದರು. ಲೋಟಸ್ ಎಕೋ ಪಾಂಡ್ ಬಳಿ ಪೋಟೋ ಗೆ ಪೋಸ್ ನೀಡಿದರು.
ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ 2021-22ನೇ ಸಾಲಿನ ಲ್ಯಾಂಡ್ ಬಿಲ್ಡಿಂಗ್ ಯೋಜನೆ ಅಡಿಯಲ್ಲಿ 37.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಚಿಂಚೋಳಿ ಅರಣ್ಯ ವಲಯದ ಹೊಸ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ ಮತ್ತು 2024-25ನೇ ಸಾಲಿನ ಲಿಂಕ್ ಡಾಕುಮೆಂಟ್ ಯೋಜನೆ ಅಡಿಯಲ್ಲಿ ಚಿಂಚೋಳಿ ಸಾಮಾಜಿಕ ಅರಣ್ಯ ವಲಯದ ಹೊಸ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಉಪ ವಲಯ ಅರಣ್ಯ ಅಧಿಕಾರಿಗಳ ವಸತಿ ಗೃಹ ಕಟ್ಟಡವನ್ನು ಸಹ ಉದ್ಘಾಟಿಸಲಾಯಿತು.
ಜಾಗೃತಿ ಅಭಿಯಾನಕ್ಕೆ ಚಾಲನೆ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗು ಕೃಷಿ ವಿಜ್ಞಾನ ಕೇಂದ್ರ ಕಲಬುರಗಿ ಸಹಯೋಗದೊಂದಿಗೆ ಕಸ್ಕುಟ (ಅಂತರವಳ್ಳಿ / ಮಂಗನ ಬಾಲ) ಕಳೆಯ ನಿರ್ವಹಣೆ ಹಾಗೂ ತೊಗರಿಯಲ್ಲಿ ಬರುವ ಗೊಡ್ಡು / ನೆಟೆ ರೋಗ ನಿರ್ವಹಣೆ ಕುರಿತು ರೈತಾಪಿ ಜನರಲ್ಲಿ ಅರಿವು ಮೂಡಿಸಲು ಕೃಷಿ ಇಲಾಖೆಯ ಜಾಗೃತಿ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು. ಇದಲ್ಲದೆ ಪೋಸ್ಟರ್ ಸಹ ಬಿಡುಗಡೆ ಮಾಡಲಾಯಿತು.
ಶಾಸಕ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಕೆ.ಕೆ.ಆರ್.ಟಿ.ಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಮಾಜಿ ಶಾಸಕ ಕೈಲಾಸನಾಥ ಪಾಟೀಲ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸುಭಾಷ ರಾಠೋಡ, ದೀಪಕನಾಗ್ ಪುಣ್ಯಶೆಟ್ಟಿ, ಟಿಟಿ ಭೀಮರಾವ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ್ ಪನ್ವಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಕೃಷಿ ಉಪನಿರ್ದೇಶಕಿ ಅನುಸೂಯಾ ಹೂಗಾರ, ಡಿ.ಸಿ.ಎಫ್ ಸುಮಿತ ಪಾಟೀಲ, ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ, ಸೇರಿದಂತೆ ಅರಣ್ಯ ಇಲಾಖೆಯ ಇತರೆ ಅಧಿಕಾರಿಗಳು ಇದ್ದರು.

