ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಗೆಳೆಯರ ಬಳಗದಿಂದ 1 ಸಾವಿರ ಸಂವಿಧಾನ ಓದು ಪುಸ್ತಕಗಳ ವಿತರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ನಿಮಿತ್ತ ಶೇಖ್ ಬಬ್ಲು, ಶರೀಫ್, ರಫೀಕ್ ಲಿಂಕ್, ಎಂ.ಎ.ನಯೀಮ್, ಶೀರಾಜ್, ರಾಜು ಅವರ ಗೆಳೆಯರ ಬಳಗದಿಂದ 1 ಸಾವಿರ ಸಂವಿಧಾನ ಓದು ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಶಿಕ್ಷಣ ಇಲಾಖೆಯ ತಾಲೂಕಿನ 49 ಸರ್ಕಾರಿ ಪ್ರೌಢಶಾಲೆಗಳಿಗೆ 500, ಸಮಾಜ ಕಲ್ಯಾಣ ಇಲಾಖೆಗೆ 100, ತಾಲೂಕು ಪಂಚಾಯತ್ ಅಡಿಯಲ್ಲಿ ಬರುವ ಅರಿವು ಕೇಂದ್ರಗಳಿಗೆ 300, ಅಲ್ಪಸಂಖ್ಯಾತರ ಇಲಾಖೆಗೆ 100 ಪುಸ್ತಕಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಯಿತು.
ಈ ವೇಳೆ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೇಖ್ ಬಬ್ಲು ಮಾತನಾಡಿ, ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳ ಮೇಲೆ ಅಧಿಕಾರ ಚಲಾಯಿಸುತ್ತಾರೆ ಹೀಗಾಗಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ವಿದ್ಯಾರ್ಥಿಗಳಲ್ಲಿ ಸಂವಿಧಾನದ ಅರಿವು ಮೂಡಿಸಲು ಸಂವಿಧಾನ ಓದು ಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.
ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ, ತಾಪಂ ಸಹಾಯಕ ನಿರ್ದೇಶಕ ಪಂಡಿತ್ ಶಿಂಧೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕ ಸಂತೋಷ್ ಶಿರನಾಳ ನಿರೂಪಿಸಿದರು.

